HomeKarnatakaBIG NEWS : ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಭೀಕರ ಕಾಡ್ಗಿಚ್ಚು : 20 ಕ್ಕೂ ಹೆಚ್ಚು ಎಕರೆ...

BIG NEWS : ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಭೀಕರ ಕಾಡ್ಗಿಚ್ಚು : 20 ಕ್ಕೂ ಹೆಚ್ಚು ಎಕರೆ ಅರಣ್ಯ ಪ್ರದೇಶ ಸುಟ್ಟು ಕರಕಲು.!

ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಭೀಕರ ಕಾಡ್ಗಿಚ್ಚು ಸಂಭವಿಸಿದ್ದು,20 ಕ್ಕೂ ಹೆಚ್ಚು ಎಕರೆ ಅರಣ್ಯ ಸುಟ್ಟು ಕರಕಲಾಗಿದೆ.

ಶುಕ್ರವಾರ ಮಧ್ಯಾಹ್ನ 12:30 ರ ವೇಳೆಗೆ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಯತ್ನಿಸಿದೆ. ಆದರೆ ಬಿಸಲಿನ ಧಗೆ ಹೆಚ್ಚಿದ್ದರಿಂದ ಬೆಂಕಿ ತೀವ್ರವಾಗಿ ವ್ಯಾಪಿಸಿದೆ.

ಬೆಟ್ಟದ ಅರಣ್ಯ ಪ್ರದೇಶದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಸುತ್ತಮುತ್ತಲ ಪ್ರದೇಶದಲ್ಲಿ ದಟ್ಟ ಹೊಗೆ ಆವರಿಸಿದೆ.ಚಾಮುಂಡಿ ಬೆಟ್ಟದಿಂದ ಉತ್ತನಹಳ್ಳಿಗೆ ಹೋಗುವ ಮಾರ್ಗದ ಬೆಟ್ಟದ ಒಂದು ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನಂತರ ಕಾಡಿನ ಉದ್ದಕ್ಕೂ ಬೆಂಕಿ ವ್ಯಾಪಿಸಿದೆ.ಅರಣ್ಯ ಇಲಾಖೆ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ದೌಡಾಯಿಸಿ ಬೆಂಕಿಯನ್ನು ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ. ಇದು ಕಿಡಿಗೇಡಿಗಳ ಕೃತ್ಯವೋ ಅಥವಾ ಕಾಡ್ಗಿಚ್ಚಿನಿಂದ ಸಂಭವಿಸಿರುವ ಅವಘಡವೋ ಎಂಬುದು ಇನ್ನಷ್ಟೇ ತಿಳಿಯಬೇಕಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular