HomeKarnatakaವಿಜಯೇಂದ್ರ ನೇತೃತ್ವದಲ್ಲೇ ಜಿಪಂ, ತಾಪಂ, ವಿಧಾನಸಭೆ ಚುನಾವಣೆ ಎದುರಿಸುತ್ತೇವೆ: ಕುಮಾರ್ ಬಂಗಾರಪ್ಪ ವಿರುದ್ಧ ರೇಣುಕಾಚಾರ್ಯ ಕಿಡಿ

ವಿಜಯೇಂದ್ರ ನೇತೃತ್ವದಲ್ಲೇ ಜಿಪಂ, ತಾಪಂ, ವಿಧಾನಸಭೆ ಚುನಾವಣೆ ಎದುರಿಸುತ್ತೇವೆ: ಕುಮಾರ್ ಬಂಗಾರಪ್ಪ ವಿರುದ್ಧ ರೇಣುಕಾಚಾರ್ಯ ಕಿಡಿ

ದಾವಣಗೆರೆ: ಮಾಜಿ ಸಚಿವ ಕುಮಾರ್ ಬಂಗಾರಪ್ಪ ವಿರುದ್ಧ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ.

ದಾವಣಗೆರೆಯಲ್ಲಿ ಮಾತನಾಡಿದ ಅವರು, ರಾಜ್ಯ ಬಿಜೆಪಿ ಅಧ್ಯಕ್ಷರ ಬದಲಾವಣೆ ಆಗುತ್ತದೆ ಎಂದು ಹೇಳ್ತಿಯಲ್ಲ, ನೀನೇನು ರಾಷ್ಟ್ರೀಯ ಅಧ್ಯಕ್ಷನಾ? ನಿನಗೆ ರಾಜಕೀಯ ಮರುಜನ್ಮ ಕೊಟ್ಟಿದ್ದೆ ಬಿ.ಎಸ್. ಯಡಿಯೂರಪ್ಪ. ನಿನಗೆ ಪಕ್ಷದ ಸಿದ್ಧಾಂತ ಗೊತ್ತಿಲ್ಲ ಎಂದು ಕಿಡಿಕಾರಿದ್ದಾರೆ.

ಶಿವಮೊಗ್ಗ ಜಿಲ್ಲಾ ಬಿಜೆಪಿ ಸಂಘಟನೆ ಜೊತೆ ನೀನು ಇಲ್ಲ. ಕುಟುಂಬ ರಾಜಕಾರಣ ಬಗ್ಗೆ ಮಾತನಾಡುವ ನೀವೇನು ಸಾಚಾಗಳಾ? ಭಿನ್ನಮತಿಯ ನಾಯಕರು ಹರಿಶ್ಚಂದ್ರನ ಮಕ್ಕಳಾ ಸಾಚಾಗಳ ಎಂದು ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ಜೊತೆಗೆ ಒಪ್ಪಂದ ಮಾಡಿಕೊಂಡು ನಮಗೆ ಪಾಠ ಮಾಡುತ್ತೀರಾ ಎಂದು ಕಿಡಿಕಾರಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದಾವಣಗೆರೆಯಲ್ಲಿ ಯಡಿಯೂರಪ್ಪ ಹುಟ್ಟುಹಬ್ಬದ ಆಚರಣೆ ಬೇಡವೆಂದು ಅಧ್ಯಕ್ಷರು ಹೇಳಿದ್ದರಿಂದ ನಾವು ಸಭೆ ಆಯೋಜನೆ ಮಾಡುತ್ತಿಲ್ಲ. ಮುಂದಿನ ದಿನಗಳಲ್ಲಿ ಎಲ್ಲರೂ ಸೇರಿಕೊಂಡು ಸಮಾವೇಶ ಮಾಡುತ್ತೇವೆ. ಸೂರ್ಯ ಚಂದ್ರ ಇರೋದು ಎಷ್ಟು ಸತ್ಯವೋ ಬಿಜೆಪಿ ಅಧ್ಯಕ್ಷರಾಗಿ ವಿಜಯೇಂದ್ರ ಮುಂದುವರೆಯುವುದು ಅಷ್ಟೇ ಸತ್ಯ. ವಿಜಯೇಂದ್ರ ನೇತೃತ್ವದಲ್ಲಿ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ ಎದುರಿಸುತ್ತೇವೆ. ಅವರ ನೇತೃತ್ವದಲ್ಲಿಯೇ ಮುಂದಿನ ವಿಧಾನಸಭೆ ಚುನಾವಣೆ ನಡೆಯಲಿದೆ ಎಂದು ರೇಣುಕಾಚಾರ್ಯ ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular