HomeIndiaBREAKING: ಅಪಘಾತದಲ್ಲಿ ಐವರು ಪ್ರವಾಸಿಗರು ಸಾವು, 5 ಮಂದಿಗೆ ಗಾಯ

BREAKING: ಅಪಘಾತದಲ್ಲಿ ಐವರು ಪ್ರವಾಸಿಗರು ಸಾವು, 5 ಮಂದಿಗೆ ಗಾಯ

ಗುಜರಾತ್‌ನ ಸುರೇಂದ್ರನಗರ ಜಿಲ್ಲೆಯಲ್ಲಿ ಭಾನುವಾರ ನಡೆದ ರಸ್ತೆ ಅಪಘಾತದಲ್ಲಿ ಪಶ್ಚಿಮ ಬಂಗಾಳದ ಐವರು ಪ್ರವಾಸಿಗರು ಸಾವನ್ನಪ್ಪಿದ್ದಾರೆ ಮತ್ತು ಇತರ ಐದು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಲಿಂಬ್ಡಿ ತಾಲೂಕಿನ ನವಿ ಮೊರ್ವಾಡ್ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಜೆ 4:30 ರ ಸುಮಾರಿಗೆ ಈ ಘಟನೆ ನಡೆದಿದೆ. ಚುಡಾ ಪೊಲೀಸ್ ಠಾಣೆಯ ಸಬ್-ಇನ್ಸ್‌ ಪೆಕ್ಟರ್ ಜೆ.ಎನ್. ಗಮಾರ ಅವರ ಪ್ರಕಾರ, ಪ್ರವಾಸಿಗರ ಗುಂಪು ಟೆಂಪೋ ಟ್ರಾವೆಲರ್‌ನಲ್ಲಿ ಪ್ರಯಾಣಿಸುತ್ತಿದ್ದು, ಅವರ ವಾಹನವು ಡಂಪರ್ ಟ್ರಕ್‌ಗೆ ಡಿಕ್ಕಿ ಹೊಡೆದಿದೆ.

ಮೃತರು ಡಿಯು ಮತ್ತು ಗಿರ್‌ ಇತರ ಪ್ರವಾಸಿ ಸ್ಥಳಗಳಿಗೆ ತೆರಳಿ ಹಿಂತಿರುಗುತ್ತಿದ್ದರು. ಅವರು ಎರಡು ದಿನಗಳ ನಂತರ ಅಹಮದಾಬಾದ್‌ ನಿಂದ ವಿಮಾನದಲ್ಲಿ ಪ್ರಯಾಣಿಸಲು ಮುಂದಾಗಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಪಘಾತದ ಪರಿಣಾಮ ಇಬ್ಬರು ಮಹಿಳೆಯರು ಮತ್ತು ಮೂವರು ಪುರುಷರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗುಂಪಿನ ಇತರ ಐದು ಸದಸ್ಯರನ್ನು ತಕ್ಷಣ ವೈದ್ಯಕೀಯ ಚಿಕಿತ್ಸೆಗಾಗಿ ಸಾಯ್ಲಾದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಅಪಘಾತದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular