HomeKarnatakaBREAKING : ರಾಜ್ಯದ ವಾಹನ ಸವಾರರಿಗೆ ಬಿಗ್ ರಿಲೀಫ್ : 'HSRP' ನಂಬರ್ ಪ್ಲೇಟ್ ಅಳವಡಿಕೆ...

BREAKING : ರಾಜ್ಯದ ವಾಹನ ಸವಾರರಿಗೆ ಬಿಗ್ ರಿಲೀಫ್ : ‘HSRP’ ನಂಬರ್ ಪ್ಲೇಟ್ ಅಳವಡಿಕೆ ಗಡುವು ಮಾ.31 ರವರೆಗೆ ವಿಸ್ತರಣೆ

ಬೆಂಗಳೂರು: ಹಳೆ ವಾಹನಗಳಿಗೆ ‘HSRP’ ನಂಬರ್ ಪ್ಲೇಟ್ ಅಳವಡಿಸಲು ಮತ್ತೆ ಗಡುವು ವಿಸ್ತರಿಸಲಾಗಿದೆ.
ಹೌದು. ಜ.31 ರವರೆಗೆ ರವರೆಗೆ HSRP ಅಳವಡಿಸಿಕೊಳ್ಳಲು ಅವಕಾಶ ಕಲ್ಪಿಸಿದ್ದ ರಾಜ್ಯ ಸರ್ಕಾರ ಇದೀಗ ಮಾ.31 ರವರೆಗೆ ಗಡುವು ವಿಸ್ತರಣೆ ಮಾಡಿದೆ.

HSRP ಅಳವಡಿಕೆಗೆ ಡಿ 31 ಕೊನೆ ದಿನವಾಗಿತ್ತು. ನಂತರ ಜ.31 ರವರೆಗೆ ಸಾರಿಗೆ ಇಲಾಖೆ ಗಡುವು ವಿಸ್ತರಿಸಿತ್ತು, ಒಟ್ಟಾರೆ 6 ನೇ ಬಾರಿಗೆ ಮತ್ತೆ ಮಾ.31 ರವರೆಗೆ ಗಡುವು ವಿಸ್ತರಣೆ ಮಾಡಿದೆ.

2019ರ ಏ. 1ಕ್ಕೆ ಮೊದಲು ನೋಂದಣಿಯಾದ ವಾಹನಗಳಿಗೆ HSRP ಕಡ್ಡಾಯ ಮಾಡಲಾಗಿದೆ. ಬಹುತೇಕ ವಾಹನಗಳಿಗೆ ಇನ್ನೂ ಹೆಚ್.ಎಸ್.ಆರ್.ಪಿ. ಹಾಕಿಸದ ಹಿನ್ನಲೆಯಲ್ಲಿ ಮತ್ತೆ ಗಡುವು ವಿಸ್ತರಣೆ ಮಾಡಲಾಗಿದೆ.
ಎಚ್ಎಸ್ಆರ್ಪಿ ಎಂದರೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಶನ್ ಪ್ಲೇಟ್ ಎಂದು ಅರ್ಥವಾಗಿದೆ. ಕರ್ನಾಟಕ ರಾಜ್ಯ ಸರ್ಕಾರ ರಾಜ್ಯದ ಎಲ್ಲಾ ವಾಹನಗಳಿಗೆ ಇದನ್ನು ಕಡ್ಡಾಯಗೊಳಿಸಿದೆ. ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸದಿದ್ದರೆ ವಾಹನ ಮಾಲೀಕರು ವಿಳಾಸ ಬದಲಾವಣೆ, ನಕಲಿ ಆರ್ಸಿ, ವಿಮೆ ಸೇರಿದಂತೆ ಇನ್ನಿತರ ಕೆಲಸಗಳನ್ನು ಮಾಡಲು ಸಾಧ್ಯವಾಗುವುದಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2019ರ ಏಪ್ರಿಲ್ 1ಕ್ಕಿಂತ ಹಿಂದಿನ ವಾಹನಗಳು ಎಚ್ಎಸ್ಆರ್ಪಿ ಅಳವಡಿಸಿಕೊಳ್ಳಬೇಕು, ನೀವು HSRP ನಂಬರ್ ಪ್ಲೇಟ್ ಗೆ ರಿಜಿಸ್ಟ್ರೇಷನ್ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ.ಕರ್ನಾಟಕ ರಾಜ್ಯದಲ್ಲಿ 1ನೇ ಏಪ್ರಿಲ್ 2019ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ ಹಳೆಯ ಎಲ್ಲಾ (ಹಳೆಯ / ಅಸ್ತಿತ್ವದಲ್ಲಿರುವ ವಾಹನಗಳು) (ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳು, ಲಘು ಮೋಟಾರು ವಾಹನಗಳು, ಪ್ರಯಾಣಿಕ ಕಾರುಗಳು, ಮಧ್ಯಮ ಮತ್ತು ಭಾರಿ ವಾಣಿಜ್ಯ ವಾಹನಗಳು, ಟ್ರೈಲರ್, ಟ್ರ್ಯಾಕ್ಟರ್ ಇತ್ಯಾದಿ) ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕಗಳನ್ನು (ಹೆಚ್ಎಸ್ಆರ್ಪಿ) ಅಳವಡಿಸುವುದು ಕಡ್ಡಾಯವಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular