HomeKarnatakaBIG NEWS : ರಾಜ್ಯದ ಪ್ರೌಢಶಾಲಾ ಶಿಕ್ಷಕರಿಗೆ ಬಡ್ತಿ : ನಾಳೆ ಶಿಕ್ಷಣ ಇಲಾಖೆಯ ಮಹತ್ವದ...

BIG NEWS : ರಾಜ್ಯದ ಪ್ರೌಢಶಾಲಾ ಶಿಕ್ಷಕರಿಗೆ ಬಡ್ತಿ : ನಾಳೆ ಶಿಕ್ಷಣ ಇಲಾಖೆಯ ಮಹತ್ವದ ಸಭೆ ನಿಗದಿ.!

ಬೆಂಗಳೂರು : ಪ್ರೌಢಶಾಲಾ ಸಹ ಶಿಕ್ಷಕರುಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡುವ ಸಂಬಂಧ ಪ್ರೌಢಶಾಲಾ ಶಿಕ್ಷಕರ ಜೇಷ್ಠತಾ ಪಟ್ಟಿ ತಯಾರಿಸಲು ನಾಳೆ ಮಹತ್ವದ ಸಭೆ ನಿಗದಿ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಶಾಲಾ ಶಿಕ್ಷಣ ಇಲಾಖೆಯ ವಿವಿಧ ಘಟಕಗಳಲ್ಲಿನ ಪ್ರೌಢಶಾಲಾ ಸಹ ಶಿಕ್ಷಕರುಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡುವ ಸಂಬಂಧ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಪ್ರೌಢಶಾಲಾ ಶಿಕ್ಷಕರುಗಳ ರಾಜ್ಯ ಮಟ್ಟದ ಒಂದೇ ಕ್ರೋಢಿಕೃತ ಜೇಷ್ಠತಾ ಪಟ್ಟಿಯನ್ನು ತಯಾರಿಸುವ ಕುರಿತಂತೆ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ದಿನಾಂಕ:28/02/2025ರ ಪೂರ್ವಾಹ್ನ 11.00 ಗಂಟೆಗೆ ಕೊಠಡಿ ಸಂಖ್ಯೆ:649, ಸಭಾಂಗಣ, 6ನೇ ಮಹಡಿ, ಶಾಲಾ ಶಿಕ್ಷಣ ಇಲಾಖೆ, ಇಲ್ಲಿ ಸಭೆಯನ್ನು ಏರ್ಪಡಿಸಲಾಗಿದೆ. ಸದರಿ ಸಭೆಗೆ ತಾವುಗಳು ತಪ್ಪದೇ ಹಾಜರಾಗುವಂತೆ ಈ ಮೂಲಕ ಕೋರಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular