HomeKarnatakaಸರ್ಕಾರ ಹಾಗೂ ರಾಜಭವನ ನಡುವೆ ಮುಂದುವರೆದ ಜಟಾಪಟಿ: ಮತ್ತೆ ಎರಡು ವಿಧೇಯಕ ವಾಪಾಸ್ ಕಳುಹಿಸಿದ ರಾಜ್ಯಪಾಲರು

ಸರ್ಕಾರ ಹಾಗೂ ರಾಜಭವನ ನಡುವೆ ಮುಂದುವರೆದ ಜಟಾಪಟಿ: ಮತ್ತೆ ಎರಡು ವಿಧೇಯಕ ವಾಪಾಸ್ ಕಳುಹಿಸಿದ ರಾಜ್ಯಪಾಲರು

ಬೆಂಗಳೂರು: ರಾಜ್ಯಪಾಲರು ಹಾಗೂ ಕಾಂಗ್ರೆಸ್ ಸರ್ಕಾರದ ನಡುವಿನ ಜಟಾಪಟಿ ಮುಂದುವರೆದಿದೆ. ಇದೀಗ ಮತ್ತೆ ಎರಡು ವಿಧೇಯಕಗಳನ್ನು ಸಹಿ ಮಾಡದೇ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಾಪಾಸ್ ಕಳುಹಿಸಿದ್ದಾರೆ.

ಕೆಲ ದಿನಗಳ ಹಿಂದೆ ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ತಿದ್ದುಪಡಿ ಮಸೂದೆ-2024 ನ್ನು ಸಹಿ ಮಡದೇ ಹಿಂತಿರುಗಿಸಿದ್ದ ರಾಜ್ಯಪಾಲರು ಇದೀಗ ಮತ್ತೆ ಎರಡು ಮಸೂದೆ ವಪಾಸ್ ಕಳುಹಿಸಿದ್ದಾರೆ.

ಕರ್ನಾಟಕ ಸಹಕಾರಿ ಸಂಘಗಳ ತಿದ್ದುಪಡಿ ವಿದೇಸ್ಯಕ-2024 ಹಾಗೂ ಕರ್ನಾಟಕ ಸೌಹಾರ್ದ ಸಹಕಾರಿ ತಿದ್ದುಪಡಿ ವಿಧೇಯಕ-2024 ಈ ಎರಡೂ ಮಸೂದೆಗಳನ್ನು ರಾಜ್ಯಪಾಲರು ವಾಪಾಸ್ ಕಳುಹಿಸಿದ್ದಾರೆ. ಈ ಮಸೂದೆಗಳ ಬಗ್ಗೆ ಸ್ಪಷ್ಟನೆ ಕೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಹಕಾರಿ ಸಂಘಗಳ ತಿದ್ದುಪಡಿ ವಿಧೇಯಕಕ್ಕೆ ರಾಜ್ಯಪಾಲರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಹಕಾರಿ ಸಂಘಗಳಿಗೆ ಮೀಸಲಾತಿ ಆಧಾರದ ಮೇಲೆ ನಾಮನಿರ್ದೇಶನ ಮಾಡಲು ಸರ್ಕಾರ ಮುಂದಾಗಿತ್ತು. ಆದರೆ ಇದಕ್ಕೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಪಷ್ಟನೆ ಕೇಳಿ ರಾಜ್ಯಪಾಲರು ಮಸೂದೆ ವಾಪಾಸ್ ಕಳುಹಿಸಿದ್ದಾರೆ.

 

 

For Latest News Updates, Join Our Whatsapp Community🚩
RELATED ARTICLES

Most Popular