HomeKarnatakaನಿರಂತರ ಅತ್ಯಾಚಾರಕ್ಕೊಳಗಾಗಿ ಮಗುವಿಗೆ ಜನ್ಮ ನೀಡಿದ ಬಾಲಕಿ: ಡಿಎನ್ಎ ಪರೀಕ್ಷೆಯಲ್ಲಿ ಸಿಕ್ಕಿಬಿದ್ದವನಿಗೆ 11 ವರ್ಷ ಜೈಲು

ನಿರಂತರ ಅತ್ಯಾಚಾರಕ್ಕೊಳಗಾಗಿ ಮಗುವಿಗೆ ಜನ್ಮ ನೀಡಿದ ಬಾಲಕಿ: ಡಿಎನ್ಎ ಪರೀಕ್ಷೆಯಲ್ಲಿ ಸಿಕ್ಕಿಬಿದ್ದವನಿಗೆ 11 ವರ್ಷ ಜೈಲು

ಧಾರವಾಡ: ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ಅಪರಾಧಿಗೆ 11 ವರ್ಷ ಜೈಲು ಶಿಕ್ಷೆ, 50,000 ರೂ. ದಂಡ ವಿಧಿಸಲಾಗಿದೆ.

ಬಾಲಕಿಗೆ 50,000 ರೂ. ಪರಿಹಾರ ನೀಡುವಂತೆ ಧಾರವಾಡದ ವಿಶೇಷ ಫೋಕ್ಸೋ ನ್ಯಾಯಾಲಯದಿಂದ ತೀರ್ಪು ಪ್ರಕಟಿಸಲಾಗಿದೆ. ಅಪರಾಧಿ ಸಿದ್ದನಗೌಡ ಮರಿಲಿಂಗನಗೌಡರಿಗೆ 11 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.

ಧಾರವಾಡದ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. 2022ರ ಜುಲೈ 2ರಂದು ಬಾಲಕಿ ಹೊಟ್ಟೆ ನೋವಿನಿಂದ ಆಸ್ಪತ್ರೆಗೆ ದಾಖಲಾದಾಗ ಪ್ರಕರಣ ಬೆಳಕಿಗೆ ಬಂದಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಾಲಕಿ ಗರ್ಭಿಣಿ ಎಂಬುದು ಖಚಿತ ಪಟ್ಟ ನಂತರ ಪ್ರಕರಣ ಬೆಳಕಿಗೆ ಬಂದಿತ್ತು. ಮನೆಯವರಿಗೆ ಹೇಳಿದರೆ ಸಾಯಿಸುವುದಾಗಿ ಬೆದರಿಕೆ ಹಾಕಿ ಆರೋಪಿ ನಿರಂತರವಾಗಿ ಅತ್ಯಾಚಾರ ಎಸಗಿದ್ದ. ಹೊಟ್ಟೆ ನೋವು ಕಾಣಿಸಿಕೊಂಡಿದ್ದರಿಂದ ಬಾಲಕಿ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದರು. ಆಕೆಗೆ ಹೆರಿಗೆಯಾಗಿ ಮಗು ಮೃತಪಟ್ಟಿತ್ತು. ಮಗುವಿನ ಡಿಎನ್ಎ ಪರೀಕ್ಷೆಯಲ್ಲಿ ಸಿದ್ದನಗೌಡ ಸಿಕ್ಕಿಬಿದ್ದಿದ್ದ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular