HomeKarnatakaBIG NEWS : ಇಂದಿನಿಂದ 'ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ' ಆರಂಭ, 400 ಸಿನಿಮಾಗಳ ಪ್ರದರ್ಶನ |Bangalore...

BIG NEWS : ಇಂದಿನಿಂದ ‘ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ’ ಆರಂಭ, 400 ಸಿನಿಮಾಗಳ ಪ್ರದರ್ಶನ |Bangalore International film fest

ಬೆಂಗಳೂರು : ಇಂದಿನಿಂದ (ಮಾ. 1) ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಆರಂಭವಾಗಲಿದ್ದು, ಈ ಬಾರಿ 400 ಸಿನಿಮಾ ಪ್ರದರ್ಶನಗೊಳ್ಳಲಿದೆ.

16ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಖ್ಯಾತ ನಟ ಕಿಶೋರ್ ಕುಮಾರ್ ಅವರನ್ನು ರಾಯಭಾರಿಯನ್ನಾಗಿ ನೇಮಕ ಮಾಡಲಾಗಿದೆ.ಮಾರ್ಚ್ 1ರಿಂದ 8ರವರೆಗೆ ಬೆಂಗಳೂರಿನಲ್ಲಿ ಅಂತರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಲಿದ್ದು, ನಟ ಕಿಶೋರ್ ಅವರನ್ನು ರಾಯಭಾರಿಯನ್ನಾಗಿ ನೇಮಕ ಮಾಡಲಾಗಿದೆ.
ಮಾರ್ಚ್ 1 ರಿಂದ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಆರಂಭವಾಗಲಿದ್ದು, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾದ ಸಾಧು ಕೋಕಿಲ ಅವರು ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಭೇಟಿ ಮಾಡಿ ಆಹ್ವಾನಿಸಿದರು.ಈ ಬಾರಿ ಚಿತ್ರೋತ್ಸವದಲ್ಲಿ ವಿಶೇಷವಾಗಿ ಎಐ ತಂತ್ರಜ್ಞಾನದ ಕುರಿತ ವಿಶೇಷ ಕಾರ್ಯಾಗಾರ ಇರಲಿದ್ದು, ಸಿನಿಮಾ ಕ್ಷೇತ್ರದ ಮೇಲೆ ಎಐ ತಂತ್ರಜ್ಞಾನದ ಪ್ರಭಾವದ ಕುರಿತು ತಜ್ಞರಿಂದ ಕಾರ್ಯಾಗಾರ ನಡೆಯಲಿದೆ.

16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಮಾರ್ಚ್ 1ರಿಂದ 8ರ ವರೆಗೆ ನಡೆಯಲಿದೆ. ಈ ವರ್ಷದ ಚಲನಚಿತ್ರೋತ್ಸವದ ಥೀಮ್ ʻಸರ್ವ ಜನಾಂಗದ ಶಾಂತಿಯ ತೋಟʼ ಆಯ್ಕೆ ಮಾಡಲಾಗಿದೆ. ಕಳೆದ ವರ್ಷ ʻಸಾಮಾಜಿಕ ನ್ಯಾಯʼ ಥೀಮ್ ನಲ್ಲಿ ಚಲನಚಿತ್ರೋತ್ಸವ ಆಯೋಜಿಸಲಾಗಿತ್ತು.2006ರಲ್ಲಿ ಆರಂಭವಾದ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಇದೀಗ 16ನೇ ಆವೃತ್ತಿಗೆ ಪ್ರವೇಶಿಸುತ್ತಿದೆ. 9ಕೋಟಿ ವೆಚ್ಚದಲ್ಲಿ ಚಲನಚಿತ್ರೋತ್ಸವನ್ನು ಆಯೋಜಿಸಲಾಗುತ್ತಿದೆ.ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಅಂತಾರಾಷ್ಟ್ರೀಯ ಮನ್ನಣೆ ಪಡೆದಿದ್ದು, ಬೆಂಗಳೂರು ಭಾರತೀಯ ಮತ್ತು ಅಂತಾರಾಷ್ಟ್ರೀಯ ಸಿನೆಮಾ ಸಂಸ್ಕೃತಿಯ ಮುಖ್ಯಕೇಂದ್ರವಾಗಿ ಬೆಳೆದಿದೆ. ಚಲನಚಿತ್ರೋತ್ಸವದಲ್ಲಿ ಪ್ರತಿ ವರ್ಷ 60ಕ್ಕೂ ದೇಶಗಳಿಂದ ಬಂದ ಸುಮಾರು 200ಕ್ಕೂ ಅಧಿಕ ಚಲನಚಿತ್ರಗಳನ್ನು, 13 ಚಿತ್ರಮಂದಿರಗಳಲ್ಲಿ, ಸುಮಾರು 400 ಪ್ರದರ್ಶನಗಳನ್ನು ಆಯೋಜಿಸಲಾಗುತ್ತಿದೆ. ಪ್ರತಿ ಆವೃತ್ತಿಯಲ್ಲಿ ಸುಮಾರು ಒಂದು ಲಕ್ಷಕ್ಕೂ ಅಧಿಕ ಪ್ರತಿನಿಧಿಗಳು ಭಾಗವಹಿಸುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular