BIG NEWS: ಕಟ್ಟಡದಲ್ಲಿ ಬೆಂಕಿ ಅವಘಡ: 7 ವರ್ಷದ ಬಾಲಕಿ ಸೇರಿದಂತೆ ಒಂದೇ ಕುಟುಂಬದ ಮೂವರು ಸಾವು

ಹೈದರಾಬಾದ್: ಕಟ್ಟಡವೊಂದರಲ್ಲಿ ಬೆಂಕಿ ಅವಘಡ ಸಂಭವಿಸಿ 7 ವರ್ಷದ ಬಾಲಕಿ ಸೇರಿದಂತೆ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.

ಇಲ್ಲಿನ ಪುಷ್ಪಲ್ಗುಡ ಹಳ್ಳಿಯ ಕಟ್ಟಡವೊಂದರಲ್ಲಿ ಈ ದುರಂತ ಸಂಭವಿಸಿದೆ. ಬೆಂಕಿ ಅವಘಡಕ್ಕೆ ಬಾಲಕಿ ಸೇರಿದಂತೆ ಮೂವರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಕಟ್ಟಡದಲ್ಲಿದ್ದ ಐದು ಜನರನ್ನು ರಕ್ಷಿಸಲಾಗಿದೆ.

ಎರಡು ಅಂತಸ್ತಿನ ಕಟ್ಟಡದ ನೆಲಮಹಡಿಯಲ್ಲಿ ಬೆಂಕಿ ಕಣಿಸಿಕೊಂಡಿದೆ. ಘಟನೆ ವೇಳೆ ಕಟ್ಟಡಲ್ಲಿ 8 ಜನರಿದ್ದರು. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಮೂರು ಗ್ಯಾಸ್ ಸಿಲಿಂದರ್ ಸ್ಫೋಟಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಗಾಯಾಳುಗಲನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read