HomeIndiaBREAKING NEWS: ಉತ್ತರಾಖಂಡದಲ್ಲಿ ಭಾರಿ ಹಿಮಪಾತ ಪ್ರಕರಣ: ಹಿಮದ ಅಡಿಯಲ್ಲಿ ಸಿಲುಕಿದ್ದ ನಾಲ್ವರು ಕಾರ್ಮಿಕರು ಸಾವು

BREAKING NEWS: ಉತ್ತರಾಖಂಡದಲ್ಲಿ ಭಾರಿ ಹಿಮಪಾತ ಪ್ರಕರಣ: ಹಿಮದ ಅಡಿಯಲ್ಲಿ ಸಿಲುಕಿದ್ದ ನಾಲ್ವರು ಕಾರ್ಮಿಕರು ಸಾವು

ಡೆಹ್ರಾಡೂನ್: ಉತ್ತರಾಖಂಡದಲ್ಲಿ ಭಾರಿ ಹಿಮಪಾತಕ್ಕೆ ಹಿಮ ಪರ್ವತ ಕುಸಿದುಬಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಮದ ಅಡಿಯಲ್ಲಿ ಸಿಲುಕಿದ್ದ ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಉತ್ತರಾಖಂಡದ ಬದರಿನಾಥ ಸೇರಿ ಹಲವೆಡೆ ನಿನ್ನೆ ಭಾರಿ ಹಿಮಪಾತವುಂಟಾಗಿತ್ತು. ಚಮೋಲಿಯ ಮಾನಾ ಬಳಿ ಹೆದ್ದಾರಿ ನಿರ್ಮಾಣ ಕಾಮಗಾರಿ ವೇಳೆಯೆ ಹಿಮಪರ್ವತ ಕುಸಿದು ಬಿದ್ದ ಪರಿಣಾಮ 55 ಕಾರ್ಮಿಕರು ಹಿಮದ ಅಡಿಯಲ್ಲಿ ಸಿಲುಕಿದ್ದರು. ಅವರಲ್ಲಿ 50 ಕಾರ್ಮಿಕರನ್ನು ರಕ್ಷಿಸ ಲಾಗಿತ್ತು. ಗಾಯಾಳುಗಳನ್ನು ಜೋಶಿಮಠದ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಾಲ್ವರು ಕಾರ್ಮಿಕರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

ಇನ್ನೂ ಐವರು ಕಾರ್ಮಿಕರು ಹಿಮದ ಅಡಿಯಲ್ಲಿ ಸಿಲುಕಿರುವ ಶಂಕೆ ಇದ್ದು, ರಕ್ಷಣಾ ಕಾರ್ಯಾಚಾರಣೆ ಮುಂದುವರೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular