HomeBusinessBIG NEWS: ಕಾನೂನು ಸಂಕಷ್ಟದಲ್ಲಿ ʼಸೆಬಿʼ ಮಾಜಿ ಮುಖ್ಯಸ್ಥೆ ; ಮಾಧವಿ ಪುರಿ ಬುಚ್ ವಿರುದ್ದ...

BIG NEWS: ಕಾನೂನು ಸಂಕಷ್ಟದಲ್ಲಿ ʼಸೆಬಿʼ ಮಾಜಿ ಮುಖ್ಯಸ್ಥೆ ; ಮಾಧವಿ ಪುರಿ ಬುಚ್ ವಿರುದ್ದ ಎಸಿಬಿ ತನಿಖೆಗೆ ಕೋರ್ಟ್ ಆದೇಶ

ಭದ್ರತಾ ಮಾರುಕಟ್ಟೆ ನಿಯಂತ್ರಕ ಸಂಸ್ಥೆ ಸೆಬಿಯ ಮಾಜಿ ಮುಖ್ಯಸ್ಥೆ ಮಾಧವಿ ಪುರಿ ಬುಚ್ ಮತ್ತು ಇತರ ಐವರು ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಮುಂಬೈನ ವಿಶೇಷ ನ್ಯಾಯಾಲಯವು ಭ್ರಷ್ಟಾಚಾರ ನಿಗ್ರಹ ದಳಕ್ಕೆ ಆದೇಶಿಸಿದೆ.

ಷೇರು ಮಾರುಕಟ್ಟೆ ವಂಚನೆ ಆರೋಪಗಳಿಗೆ ಸಂಬಂಧಿಸಿದಂತೆ ಈ ಆದೇಶ ನೀಡಲಾಗಿದೆ. ಸೆಬಿಯ ನಿಯಮಗಳನ್ನು ಉಲ್ಲಂಘಿಸಿರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಸ್ಥಳೀಯ ಪತ್ರಕರ್ತ ಸಪನ್ ಶ್ರೀವಾಸ್ತವ ಅವರು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಸೆಬಿಯ ನಿರ್ಲಕ್ಷ್ಯ ಮತ್ತು ಕುತಂತ್ರಕ್ಕೆ ಪುರಾವೆಗಳಿವೆ ಎಂದು ಹೇಳಿದೆ. ಈ ಬಗ್ಗೆ ನಿಷ್ಪಕ್ಷಪಾತ ತನಿಖೆಯ ಅಗತ್ಯವಿದೆ ಎಂದು ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇತ್ತೀಚೆಗೆ ಮಾಧವಿ ಪುರಿ ಬುಚ್ ಅವರ ಅಧಿಕಾರಾವಧಿ ಮುಕ್ತಾಯವಾಗಿತ್ತು. ಇದರ ಬೆನ್ನಲ್ಲೇ ಈ ಬೆಳವಣಿಗೆ ಸಂಭವಿಸಿದೆ. ಈ ಆದೇಶವು ಮಾಧವಿ ಪುರಿ ಬುಚ್ ಮತ್ತು ಇತರ ಐವರು ಅಧಿಕಾರಿಗಳಿಗೆ ಸಂಕಷ್ಟ ತಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular