HomeKarnatakaBREAKING NEWS: ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ದೀಢೀರ್ ಮುಂದೂಡಿಕೆ: ಮತ್ತೊಂದು ದಿನಾಂಕ ನಿಗದಿ

BREAKING NEWS: ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ದೀಢೀರ್ ಮುಂದೂಡಿಕೆ: ಮತ್ತೊಂದು ದಿನಾಂಕ ನಿಗದಿ

ಬೆಂಗಳೂರು: ಮಾರ್ಚ್ 4ರಂದು ನಿಗದಿಯಾಗಿದ್ದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ದಿಢೀರ್ ಮುಂದೂಡಿಕೆಯಾಗಿದೆ ಎಂದು ತಿಳಿದುಬಂದಿದೆ.

ಬಜೆಟ್ ಅಧಿವೇಶನ ಹಿನ್ನೆಲೆಯಲ್ಲಿ ನಾಳೆ ಮಾಚ್ 4ರಂದು ಸಂಜೆ 6 ಗಂಟೆಗೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿತ್ತು. ಆದರೆ ಸಭೆ ಮುಂದೂಡಿಕೆಯಾಗಿದೆ. ನಾಳೆ ನಿಗದಿಯಾಗಿದ್ದ ಸಭೆಯನ್ನು ಮಾರ್ಚ್ 10ರಂದು ಸಂಜೆ 6 ಗಂಟೆಗೆ ನಿಗದಿಪಡಿಸಲಾಗಿದೆ.

ಮಾರ್ಚ್ 7ರಂದು ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡಲಿದ್ದು, ಬಜೆಟ್ ಮಂಡನೆ ಬಳಿಕ ಶಾಸಕಾಂಗ ಪಕ್ಷದ ಸಭೆ ನಡೆಸಲು ತೀರ್ಮಾನಿಸಲಾಗಿದೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular