HomeKarnatakaರಾಜ್ಯಮಟ್ಟದ SSLC ವಿಜ್ಞಾನ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ: ತನಿಖೆಗೆ ಖಾಸಗಿ ಶಾಲೆಗಳ ಒತ್ತಾಯ

ರಾಜ್ಯಮಟ್ಟದ SSLC ವಿಜ್ಞಾನ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ: ತನಿಖೆಗೆ ಖಾಸಗಿ ಶಾಲೆಗಳ ಒತ್ತಾಯ

ಬೆಂಗಳೂರು: ಸೋಮವಾರ ನಡೆದ ರಾಜ್ಯಮಟ್ಟದ ಎಸ್.ಎಸ್.ಎಲ್.ಸಿ. ಪೂರ್ವ ಸಿದ್ಧತಾ ಪರೀಕ್ಷೆಯ ವಿಜ್ಞಾನ ಪ್ರಶ್ನೆ ಪತ್ರಿಕೆ ಭಾನುವಾರ ರಾತ್ರಿಯೇ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿರುವ ಆರೋಪ ಕೇಳಿ ಬಂದಿದೆ.

ಕೆಲ ಯೂಟ್ಯೂಬ್ ಚಾನೆಲ್ ಗಳಲ್ಲಿ ವಿಜ್ಞಾನ ವಿಷಯದ ಭೌತಶಾಸ್ತ್ರ ವಿಭಾಗದ ಸಂಬಂಧಿತ ಪ್ರಶ್ನೆ ಪತ್ರಿಕೆ ಎನ್ನಲಾದ ಕೆಲವು ಪ್ರತಿಗಳು ಪರೀಕ್ಷೆ ಆರಂಭಕ್ಕೆ 18 ಗಂಟೆಗಳ ಮೊದಲೇ ಹರಿದಾಡಿವೆ. ಸೋಮವಾರ ಪ್ರಶ್ನೆ ಪರೀಕ್ಷೆಯಲ್ಲಿ ನೀಡಿದ ಪ್ರಶ್ನೆ ಪತ್ರಿಕೆಯನ್ನು ಸೋರಿಕೆಯಾದ ಪ್ರಶ್ನೆ ಪತ್ರಿಕೆ ಜೊತೆ ತಾಳೆ ಹಾಕಿ ನೋಡಿದಾಗ ಎರಡು ಒಂದೇ ಆಗಿದೆ. ಯಾವುದೇ ವ್ಯತ್ಯಾಸ ಕಂಡು ಬಂದಿಲ್ಲ.

ಹೀಗಾಗಿ ಚಳ್ಳಕೆರೆ ಸೇರಿದಂತೆ ವಿವಿಧ ಭಾಗದ ಕೆಲವು ವಿದ್ಯಾರ್ಥಿಗಳು ತಮ್ಮ ಶಿಕ್ಷಕರ ಗಮನಕ್ಕೆ ಈ ವಿಷಯ ತಂದಿದ್ದಾರೆ. ಇದು ಖಾಸಗಿ ಶಾಲಾ ಸಂಘಟನೆಗಳಿಗೆ ತಲುಪಿದ್ದು, ಕ್ಯಾಮ್ಸ್, ಅವರ್ಸ್ ಸ್ಕೂಲ್ ಪ್ರತಿನಿಧಿಗಳು ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಪರೀಕ್ಷೆ ಮುನ್ನ ದಿನವೇ ಸೋರಿಕೆಯಾಗಿದ್ದು, ಪರೀಕ್ಷಾ ಮಂಡಳಿ ತನಿಖೆ ನಡೆಸಬೇಕೆಂದು ಖಾಸಗಿ ಶಾಲೆಗಳು ಒತ್ತಾಯಿಸಿವೆ. ಸೋಮವಾರ ಮಧ್ಯಾಹ್ನ 2 ಗಂಟೆಯಿಂದ ಸಂಜೆ 5:15 ರವರೆಗೆ ಎಸ್ಎಸ್ಎಲ್ಸಿ ವಿಜ್ಞಾನ ಪೂರ್ವ ಸಿದ್ಧತಾ ರಾಜ್ಯ ಮಟ್ಟದ ಪರೀಕ್ಷೆ ನಿಗದಿಯಾಗಿತ್ತು. ಭಾನುವಾರ ರಾತ್ರಿಯೇ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿವೆ ಎಂದು ಹೇಳಲಾಗಿದ್ದು, ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತನಿಖೆ ನಡೆಸಬೇಕು ಎಂದು ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಡಿ. ಶಶಿಕುಮಾರ್ ಒತ್ತಾಯಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular