HomeKarnatakaBREAKING: ಚಿನ್ನ ಕಳ್ಳ ಸಾಗಣೆ ಪ್ರಕರಣ: ನಟಿ ರನ್ಯಾ ರಾವ್ ಗೆ 14 ದಿನ...

BREAKING: ಚಿನ್ನ ಕಳ್ಳ ಸಾಗಣೆ ಪ್ರಕರಣ: ನಟಿ ರನ್ಯಾ ರಾವ್ ಗೆ 14 ದಿನ ನ್ಯಾಯಾಂಗ ಬಂಧನ

ಬೆಂಗಳೂರು: ಚಿನ್ನ ಕಳ್ಳ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರ್ಚ್ 18ರವರೆಗೆ ನಟಿ ರನ್ಯಾ ರಾವ್  ಅವರನ್ನು ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ.

ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆರೋಪಿ ರನ್ಯಾ ರಾವ್ ಅವರನ್ನು ಬಂಧಿಸಲಾಗಿತ್ತು. ಅವರನ್ನು ಡಿ.ಆರ್.ಐ. ಅಧಿಕಾರಿಗಳು ವಶಕ್ಕೆ ಕೇಳದ ಹಿನ್ನೆಲೆಯಲ್ಲಿ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ನ್ಯಾಯಾಧೀಶರು ಆದೇಶಿಸಿದ್ದಾರೆ.

ರನ್ಯಾ ರಾವ್ ಬಳಿ ಒಟ್ಟು 14.8 ಕೆಜಿ ಚಿನ್ನ ಸಿಕ್ಕಿರುವ ಮಾಹಿತಿ ಇದ್ದು ರಾಜ್ಯದ ಇತಿಹಾಸದಲ್ಲಿ ಅತಿ ದೊಡ್ಡ ಚಿನ್ನದ ಅಕ್ರಮ ಸಾಗಣೆ ಪ್ರಕರಣ ಎನ್ನಲಾಗಿದೆ. ರನ್ಯಾ ರಾವ್ ಡಿಜಿಪಿ ಡಾ. ಕೆ. ರಾಮಚಂದ್ರರಾವ್ ಅವರ ಮಲಮಗಳಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular