HomeKarnatakaBREAKING : ಕಲಬುರಗಿಯಲ್ಲಿ 'PUC' ವಿದ್ಯಾರ್ಥಿನಿ ಬದಲು 'ರಾಜ್ಯಶಾಸ್ತ್ರ' ಪರೀಕ್ಷೆ ಬರೆದ ಕಾಂಗ್ರೆಸ್ ಕಾರ್ಯಕರ್ತೆ ಅರೆಸ್ಟ್.!

BREAKING : ಕಲಬುರಗಿಯಲ್ಲಿ ‘PUC’ ವಿದ್ಯಾರ್ಥಿನಿ ಬದಲು ‘ರಾಜ್ಯಶಾಸ್ತ್ರ’ ಪರೀಕ್ಷೆ ಬರೆದ ಕಾಂಗ್ರೆಸ್ ಕಾರ್ಯಕರ್ತೆ ಅರೆಸ್ಟ್.!

ಕಲಬುರಗಿ : ಪಿಯುಸಿ ವಿದ್ಯಾರ್ಥಿನಿ ಬದಲು ರಾಜ್ಯಶಾಸ್ತ್ರ ಪರೀಕ್ಷೆ ಬರೆದ ಕಾಂಗ್ರೆಸ್ ಕಾರ್ಯಕರ್ತೆಯನ್ನು ಪೊಲೀಸರು ಬಂಧಿಸಿರುವ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಮಿಲಿಂದ್ ಕಾಲೇಜಿನಲ್ಲಿ ಈಕೆ ವಿದ್ಯಾರ್ಥಿನಿ ಬದಲಿಗೆ ಪರೀಕ್ಷೆ ಬರೆದು ಬಂಧನಕ್ಕೊಳಗಾಗಿದ್ದಾರೆ. ಮಾ.5 ರಂದು ರಾಜ್ಯಶಾಸ್ತ್ರ ಪರೀಕ್ಷೆ ನಡೆದಿತ್ತು, ಅರ್ಚನಾ ಎಂಬ ವಿದ್ಯಾರ್ಥಿನಿ ಬದಲಿಗೆ ಕಾನೂನು ವಿದ್ಯಾರ್ಥಿನಿ /ಕಾಂಗ್ರೆಸ್ ಕಾರ್ಯಕರ್ತೆ ಸಂಪೂರ್ಣ ಪಾಟೀಲ್ ಎಂಬುವವರು ಪರೀಕ್ಷೆ ಬರೆದಿದ್ದಾರೆ ಎನ್ನಲಾಗಿದೆ.

ಕಾರ್ಯಕರ್ತರ ಸಂಘಟನೆಯೊಂದು ಕಾಲೇಜಿನಲ್ಲಿ ಅಕ್ರಮವನ್ನು ಪ್ರಶ್ನಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಮಿಲಿಂದ್ ಶಾಲೆಯ ಪ್ರಾಂಶುಪಾಲರು ಬ್ರಹ್ಮಪೂರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular