HomeAgricultureರಾಜ್ಯದ ರೈತರಿಗೆ ಸಿಹಿ ಸುದ್ದಿ: ಕೃಷಿ ಪಂಪ್ ಸೆಟ್ ಗಳಿಗೆ ಹಗಲಿನಲ್ಲೇ 7 ಗಂಟೆ ನಿರಂತರ...

ರಾಜ್ಯದ ರೈತರಿಗೆ ಸಿಹಿ ಸುದ್ದಿ: ಕೃಷಿ ಪಂಪ್ ಸೆಟ್ ಗಳಿಗೆ ಹಗಲಿನಲ್ಲೇ 7 ಗಂಟೆ ನಿರಂತರ ವಿದ್ಯುತ್

ಬೆಂಗಳೂರು: ರಾಜ್ಯದ ರೈತರ ಕೃಷಿ ಪಂಪ್ ಸೆಟ್ ಗಳಿಗೆ ಹಗಲು ವೇಳೆಯೇ ನಿರಂತರ 7 ಗಂಟೆ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ.

ಗುರುವಾರ ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್ ಸದಸ್ಯ ಸಿ.ಬಿ. ಸುರೇಶ್ ಬಾಬು ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ತಾಂತ್ರಿಕ ಸಾದ್ಯತೆ ಇರುವ ಉಪ ಕೇಂದ್ರಗಳಿಂದ ನಿರಂತರ 7 ಗಂಟೆ ತ್ರೀ ಫೇಸ್ ವಿದ್ಯುತ್ ಸರಬರಾಜು ಮಾಡಲಾಗುವುದು. ತಾಂತ್ರಿಕ ಸಾಧ್ಯತೆ ಇಲ್ಲದ ಉಪ ಕೇಂದ್ರಗಳಲ್ಲಿ ಪಾಳಿಯಲ್ಲಿ ಹಗಲು ವೇಳೆ 4 ಗಂಟೆ, ರಾತ್ರಿ ವೇಳೆ 3 ಗಂಟೆ ಸೇರಿ ಒಟ್ಟು 7 ಗಂಟೆ 3 ತ್ರೀ ಫೇಸ್ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಅಂತರ್ಜಲ ಕುಸಿತದ ಕಾರಣ ಉಲ್ಲೇಖಿಸಿ ತ್ರೀ ಫೇಸ್ ವಿದ್ಯುತ್ ಸರಬರಾಜು ಸಮಯ ಬದಲಾವಣೆಯ ಕೋರಿಕೆ ಬಂದಿಲ್ಲ ಎಂದು ಸಚಿವ ಜಾರ್ಜ್ ಮಾಹಿತಿ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular