BIG NEWS : ‘ಬಜೆಟ್’ ಬರಿ ಹಾಳೆಗಳ ಮೇಲಿನ ಲೆಕ್ಕವಲ್ಲ, ರಾಜ್ಯದ ಏಳುಕೋಟಿ ಕನ್ನಡಿಗರ ‘ಭವಿಷ್ಯ’-CM ಸಿದ್ದರಾಮಯ್ಯ

ಬೆಂಗಳೂರು: ಬಜೆಟ್ ಎಂಬುದು ಬರಿ ಹಾಳೆಗಳ ಮೇಲಿನ ಲೆಕ್ಕವಲ್ಲ, ರಾಜ್ಯದ ಏಳುಕೋಟಿ ಕನ್ನಡಿಗರ ಭವಿಷ್ಯ ರೂಪಿಸುವ ಕೈಪಿಡಿ ಎನ್ನುವುದು ನನ್ನ ನಂಬಿಕೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಕಳೆದ ಕೆಲವು ದಿನಗಳಿಂದ ನಮ್ಮ ಸಂಪುಟದ ಸಚಿವರು, ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು, ರೈತ, ಶೋಷಿತ, ಅಲ್ಪಸಂಖ್ಯಾತ, ಹಿಂದುಳಿದ ವರ್ಗಗಳ ಸಂಘಟನೆಗಳ ಮುಖಂಡರು ಹಾಗೂ ವಿವಿಧ ಧರ್ಮಗಳ ಗುರುಗಳೊಂದಿಗೆ ಸಭೆ ನಡೆಸಿ, ಪಕ್ಷಾತೀತವಾಗಿ ಸಮಾಜದ ಎಲ್ಲಾ ಜಾತಿ, ಜನಾಂಗ, ವರ್ಗದ ಜನರ ಆಶೋತ್ತರಗಳನ್ನು ಆಲಿಸಿ, ಅವುಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವ ಪ್ರಯತ್ನವನ್ನು ಈ ಬಜೆಟ್ ಮೂಲಕ ಮಾಡಿದ್ದೇನೆ ಎಂದಿದ್ದಾರೆ.

ಬಜೆಟ್ ಎಂಬುದು ಬರಿ ಹಾಳೆಗಳ ಮೇಲಿನ ಲೆಕ್ಕವಲ್ಲ, ರಾಜ್ಯದ ಏಳುಕೋಟಿ ಕನ್ನಡಿಗರ ಭವಿಷ್ಯ ರೂಪಿಸುವ ಕೈಪಿಡಿ ಎನ್ನುವುದು ನನ್ನ ನಂಬಿಕೆ. ನಾಡಿನ ಪ್ರತಿಯೊಬ್ಬ ಪ್ರಜೆಯನ್ನು ಸರ್ಕಾರದ ಯಾವುದಾದರೊಂದು ಯೋಜನೆಯ ಫಲಾನುಭವಿಯನ್ನಾಗಿಸುವ ಪ್ರಾಮಾಣಿಕ ಪ್ರಯತ್ನವನ್ನು ಬಜೆಟ್ ಮೂಲಕ ಮಾಡಿದ್ದೇನೆ ಎನ್ನುವ ಭರವಸೆ ನನಗಿದೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read