HomeIndiaBREAKING: 7 ಕೋಟಿ ರೂಪಾಯಿ ಚೆಕ್ ಬೌನ್ಸ್ ಪ್ರಕರಣದಲ್ಲಿ ಕ್ರಿಕೆಟ್ ದಿಗ್ಗಜ ವೀರೇಂದ್ರ ಸೆಹ್ವಾಗ್ ಸಹೋದರ...

BREAKING: 7 ಕೋಟಿ ರೂಪಾಯಿ ಚೆಕ್ ಬೌನ್ಸ್ ಪ್ರಕರಣದಲ್ಲಿ ಕ್ರಿಕೆಟ್ ದಿಗ್ಗಜ ವೀರೇಂದ್ರ ಸೆಹ್ವಾಗ್ ಸಹೋದರ ಅರೆಸ್ಟ್

ನವದೆಹಲಿ: ಟೀಂ ಇಂಡಿಯಾ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್ ಅವರ ಕಿರಿಯ ಸಹೋದರ ವಿನೋದ್ ಸೆಹ್ವಾಗ್ ಅವರನ್ನು ಚಂಡಿಗಡ ಪೊಲೀಸರು ಬಂಧಿಸಿದ್ದಾರೆ.

ವಿನೋದ್ ಸೆಹ್ವಾಗ್ ವಿರುದ್ದ 7 ಕೋಟಿ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಬಂಧಿಸಲಾಗಿದೆ. ಪ್ರಕರಣದ ವಿಚಾರಣೆಗೆ ವಿನೋದ್ ನ್ಯಾಯಾಲಯಕ್ಕೆ ಹಾಜರಾಗದ ಕಾರಣ ಅವರನ್ನು ತಲೆಮರೆಸಿಕೊಂಡ ಆರೋಪಿ ಎಂದು ಕೋರ್ಟ್ ಘೋಷಿಸಿತ್ತು. ಹೀಗಾಗಿ ಅವರನ್ನು ಚಂಡಿಗಡ ಮಣಿಮಾಜ್ರಾ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ವಿನೋದ್ ಹರ್ಯಾಣದ ರೋಹ್ಟಕ್ ನ ಬಹದ್ದೂರ್ ಗಢಬಳಿ ತಂಪು ಪಾನೀಯಗಳ ಕಾರ್ಖಾನೆ ನಡೆಸುತ್ತಿದ್ದಾರೆ. ಅವರು ಮತ್ತು ಅವರ ಪಾಲುದಾರರು ಮಾಡಿದ್ದ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಈ ಬೆಳವಣಿಗೆ ನಡೆದಿದೆ. ವಿನೋದ್ ಸೆಹ್ವಾಗ್ ಅವರ ಪಾಲುದಾರರು ಸೇರಿಕೊಂಡು ಹಿಮಾಚಲ ಪ್ರದೇಶದಲ್ಲಿರುವ ನೈನಾ ಪ್ಲಾಸ್ಟಿಕ್ ಕಾರ್ಖಾನೆಯಿಂದ ತಂಪು ಪಾನೀಯ ತುಂಬುವ ಪ್ಲಾಸ್ಟಿಕ್ ಬಾಟಲಿಗಳನ್ನು ಖರೀದಿಸಿದ್ದು, 7 ಕೋಟಿ ರೂ.ಗೆ ಪ್ರತಿಯಾಗಿ ತಲಾ ಒಂದು ಕೋಟಿ ರೂ.ಗಳ 7 ಬ್ಯಾಂಕ್ ಚೆಕ್ ಗಳನ್ನು ನೀಡಿತ್ತು. ಆದರೆ, ಹಣದ ಕೊರತೆಯಿಂದ ಚೆಕ್ ಬೌನ್ಸ್ ಆಗಿದ್ದವು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನೈನಾ ಕಂಪನಿ ವಿನೋದ್ ಮತ್ತು ಅವರ ಕಂಪನಿ ನಿರ್ದೇಶಕರ ವಿರುದ್ಧ ಚೆಕ್ ಬೌನ್ಸ್ ಪ್ರಕರಣ ದಾಖಲಿಸಲಾಗಿತ್ತು. ಕೋರ್ಟ್ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ವಿನೋದ್ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಲಾಗಿತ್ತು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular