HomeKarnatakaಗಮನಿಸಿ: ಮಾ. 11 ರಿಂದ ರಾಜ್ಯದಲ್ಲಿ ಗುಡುಗು ಸಹಿತ ಮಳೆ ಆರಂಭ, ಮುಂಗಾರು ಪೂರ್ವ ಮಳೆ...

ಗಮನಿಸಿ: ಮಾ. 11 ರಿಂದ ರಾಜ್ಯದಲ್ಲಿ ಗುಡುಗು ಸಹಿತ ಮಳೆ ಆರಂಭ, ಮುಂಗಾರು ಪೂರ್ವ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಬಿಸಿಲ ತಾಪ ಹೆಚ್ಚಾಗಿದೆ. ಹೀಗಿರುವಾಗಲೇ ಮಾರ್ಚ್ 11ರಿಂದ ವಿವಿಧ ಭಾಗಗಳಲ್ಲಿ ಮುಂಗಾರುಪೂರ್ವ ಮಳೆ ಆರಂಭವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆಯ ಕ್ಯಾಲೆಂಡರ್ ಪ್ರಕಾರ ಮಾರ್ಚ್ ನಿಂದ ಮೇ ವರೆಗೆ ಮುಂಗಾರು ಪೂರ್ವ ಅವಧಿಯಾಗಿದೆ. ಈ ಅವಧಿಯಲ್ಲಿ ಬಿಸಿಲ ತಾಪಕ್ಕೆ ಮಳೆಯಾಗಲಿದೆ. ಅದೇ ರೀತಿ ವಾತಾವರಣ ಸೃಷ್ಟಿಯಾಗಿದ್ದು, ಮಾರ್ಚ್ 12 ರಿಂದ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಾರ್ಚ್ 12 ರಿಂದ 14ರ ವರೆಗೆ ಮೂರು ದಿನ ಮಳೆ ಆಗಲಿದೆ. ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮಾರ್ಚ್ 11 ರಿಂದ 14ರವರೆಗೆ ಗುಡುಗು ಸಹಿತ ಹಗುರ ಮಳೆಯಾಗುವ ಸಂಭವ ಇದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular