HomeIndiaಚಾಂಪಿಯನ್ಸ್ ಟ್ರೋಫಿ ಗೆದ್ದ ಭಾರತ ತಂಡಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ ಅಭಿನಂದನೆ

ಚಾಂಪಿಯನ್ಸ್ ಟ್ರೋಫಿ ಗೆದ್ದ ಭಾರತ ತಂಡಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ ಅಭಿನಂದನೆ

ನವದೆಹಲಿ: ನಾಯಕ ರೋಹಿತ್ ಶರ್ಮಾ ಅತ್ಯುತ್ತಮ ಅರ್ಧಶತಕದೊಂದಿಗೆ ಮುಂಚೂಣಿಯಲ್ಲಿ ನಿಂತು ಮುನ್ನಡೆಸಿದ್ದು, ಭಾನುವಾರ ನಡೆದ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ನಾಲ್ಕು ವಿಕೆಟ್‌ಗಳ ಜಯ ಸಾಧಿಸುವ ಮೂಲಕ ಭಾರತ ಅಭೂತಪೂರ್ವ ಮೂರನೇ ಚಾಂಪಿಯನ್ಸ್ ಟ್ರೋಫಿ ಪ್ರಶಸ್ತಿಯನ್ನು ಗೆದ್ದುಕೊಂಡಿದೆ.

ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆದ್ದಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಭಾರತೀಯ ಕ್ರಿಕೆಟ್ ತಂಡವನ್ನು ಶ್ಲಾಘಿಸಿದ್ದಾರೆ. ಪಂದ್ಯಾವಳಿಯಾದ್ಯಂತ ಅದ್ಭುತವಾಗಿ ಆಡಿದ್ದಾರೆ. ಅಸಾಧಾರಣ ಆಟ ಮತ್ತು ಅಸಾಧಾರಣ ಫಲಿತಾಂಶ! ಐಸಿಸಿ ಚಾಂಪಿಯನ್ಸ್ ಟ್ರೋಫಿಯನ್ನು ಭಾರತಕ್ಕೆ ತಂದಿದ್ದಕ್ಕಾಗಿ ನಮ್ಮ ಕ್ರಿಕೆಟ್ ತಂಡದ ಬಗ್ಗೆ ಹೆಮ್ಮೆಯಿದೆ. ಅವರು ಪಂದ್ಯಾವಳಿಯಾದ್ಯಂತ ಅದ್ಭುತವಾಗಿ ಆಡಿದ್ದಾರೆ. ಅದ್ಭುತ ಸರ್ವತೋಮುಖ ಪ್ರದರ್ಶನಕ್ಕಾಗಿ ನಮ್ಮ ತಂಡಕ್ಕೆ ಅಭಿನಂದನೆಗಳು ಎಂದು ಮೋದಿ ತಿಳಿಸಿದ್ದಾರೆ.

ಭಾರತ ತಂಡಕ್ಕೆ ರಾಷ್ಟ್ರಪತಿ ಅಭಿನಂದನೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿ, ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆದ್ದ ಭಾರತ ತಂಡಕ್ಕೆ ಹೃತ್ಪೂರ್ವಕ ಅಭಿನಂದನೆಗಳು. ಭಾರತ ಮೂರು ಬಾರಿ ಟ್ರೋಫಿ ಗೆದ್ದ ಏಕೈಕ ತಂಡವಾಗಿದೆ. ಕ್ರಿಕೆಟ್ ಇತಿಹಾಸ ಸೃಷ್ಟಿಸಿದ್ದಕ್ಕಾಗಿ ಆಟಗಾರರು, ಆಡಳಿತ ಮಂಡಳಿ ಮತ್ತು ಸಹಾಯಕ ಸಿಬ್ಬಂದಿ ಅತ್ಯುನ್ನತ ಪ್ರಶಂಸೆಗೆ ಅರ್ಹರು. ಭಾರತೀಯ ಕ್ರಿಕೆಟ್‌ಗೆ ಉಜ್ವಲ ಭವಿಷ್ಯ ಸಿಗಲಿ ಎಂದು ಹಾರೈಸುತ್ತೇನೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular