HomeKarnatakaನಿರುದ್ಯೋಗಿ ಮಹಿಳೆಯರಿಗೆ ಗುಡ್ ನ್ಯೂಸ್ : ಉಚಿತ ಫ್ಯಾಶನ್ ಡಿಸೈನಿಂಗ್/ ಟೈಲರಿಂಗ್ ತರಬೇತಿಗೆ ಅರ್ಜಿ ಆಹ್ವಾನ

ನಿರುದ್ಯೋಗಿ ಮಹಿಳೆಯರಿಗೆ ಗುಡ್ ನ್ಯೂಸ್ : ಉಚಿತ ಫ್ಯಾಶನ್ ಡಿಸೈನಿಂಗ್/ ಟೈಲರಿಂಗ್ ತರಬೇತಿಗೆ ಅರ್ಜಿ ಆಹ್ವಾನ

ಮಡಿಕೇರಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಫ್ಯಾಶನ್ ಡಿಸೈನಿಂಗ್/ ಟೈಲರಿಂಗ್ ಕುರಿತ 30 ದಿನಗಳ ಉಚಿತ ತರಬೇತಿಯು ಏಪ್ರಿಲ್ 03 ರಿಂದ ಆರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಮಹಿಳೆಯರು ತರಬೇತಿಗೆ ಅರ್ಜಿ ಸಲ್ಲಿಸಬಹುದು.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಅಭ್ಯರ್ಥಿಗಳು ಆಧಾರ್ ಕಾರ್ಡ್ನ್ನು ಹೊಂದಿರಬೇಕು ಹಾಗೂ ನರೇಗಾ ಯೋಜನೆಯ ಜಾಬ್ ಕಾರ್ಡ್ ಅಥವಾ ಬಿಪಿಎಲ್ ಕಾರ್ಡ್ ಅನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರ ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಮಾರ್ಚ್ 20 ಕೊನೆಯ ದಿನವಾಗಿದೆ.
ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗೆ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9241482541, 9380162042, 9740982585, 9113880324 ನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular