HomeKarnatakaಕೊನೆಗೂ ಗೃಹಲಕ್ಷ್ಮಿಯರಿಗೆ ಗುಡ್ ನ್ಯೂಸ್: ಒಟ್ಟಿಗೆ 2 ತಿಂಗಳ ಬಾಕಿ ಹಣ ಖಾತೆಗೆ ಜಮಾ

ಕೊನೆಗೂ ಗೃಹಲಕ್ಷ್ಮಿಯರಿಗೆ ಗುಡ್ ನ್ಯೂಸ್: ಒಟ್ಟಿಗೆ 2 ತಿಂಗಳ ಬಾಕಿ ಹಣ ಖಾತೆಗೆ ಜಮಾ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಪ್ರಸಕ್ತ ವರ್ಷದ ಜನವರಿ ಮತ್ತು ಫೆಬ್ರವರಿ ತಿಂಗಳ ಹಣ ಬಿಡುಗಡೆ ಬಾಕಿ ಇದ್ದು, ಶೀಘ್ರದಲ್ಲಿಯೇ ಬಾಕಿ ಮೊತ್ತವನ್ನು ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ.

ಗೃಹಲಕ್ಷ್ಮಿ ಹಣ ಬಾಕಿ ಇರುವ ಬಗ್ಗೆ ವಿಧಾನಸಭೆಯಲ್ಲಿ ಪ್ರತಿಪಕ್ಷ ಉಪ ನಾಯಕ ಅರವಿಂದ ಬೆಲ್ಲದ ಪ್ರಶ್ನಿಸಿ, ಕಳೆದ ಎರಡು ತಿಂಗಳಿಂದ ಗೃಹಲಕ್ಷ್ಮಿ ಯೋಜನೆಯ ಹಣ ಫಲಾನುಭವಿಗಳ ಖಾತೆಗೆ ಜಮಾ ಆಗಿಲ್ಲ ಎಂದು ದೂರಿದ್ದಾರೆ.

ಅವರ ಪ್ರಶ್ನೆಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಪರವಾಗಿ ಸಂತೋಷ ಲಾಡ್ ಉತ್ತರ ನೀಡಿ, ಸಂಪನ್ಮೂಲ ಸಂಗ್ರಹವನ್ನು ಆಧರಿಸಿ ಸರ್ಕಾರ ಹಣ ಬಿಡುಗಡೆ ನಿರ್ಧಾರ ಕೈಗೊಳ್ಳಬೇಕಾಗುತ್ತದೆ. ಖಜಾನೆಯಲ್ಲಿ ಸಮಸ್ಯೆಗಳ ಕಾರಣದಿಂದ ಎರಡು ತಿಂಗಳ ಹಣ ಬಿಡುಗಡೆಯಾಗಿಲ್ಲ. ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಪ್ರಸಕ್ತ ವರ್ಷದ ಜನವರಿ ಮತ್ತು ಫೆಬ್ರವರಿ ತಿಂಗಳ ಹಣ ಬಿಡುಗಡೆ ಬಾಕಿ ಇದ್ದು, ಶೀಘ್ರದಲ್ಲಿಯೇ ಬಾಕಿ ಮೊತ್ತವನ್ನು ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡಲಾಗುವುದು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular