HomeCrimeInstagram ಸ್ನೇಹಿತನನ್ನು ಭೇಟಿಯಾಗಲು ಭಾರತಕ್ಕೆ ಬಂದ ಬ್ರಿಟಿಷ್‌ ಮಹಿಳೆ ಅತ್ಯಾಚಾರಕ್ಕೆ ಬಲಿ

Instagram ಸ್ನೇಹಿತನನ್ನು ಭೇಟಿಯಾಗಲು ಭಾರತಕ್ಕೆ ಬಂದ ಬ್ರಿಟಿಷ್‌ ಮಹಿಳೆ ಅತ್ಯಾಚಾರಕ್ಕೆ ಬಲಿ

ಇನ್‌ಸ್ಟಾಗ್ರಾಮ್‌ನಲ್ಲಿ ಪರಿಚಯವಾದ ಸ್ನೇಹಿತನನ್ನು ಭೇಟಿಯಾಗಲು ಭಾರತಕ್ಕೆ ಬಂದ ಬ್ರಿಟಿಷ್ ಮಹಿಳೆ, ದೆಹಲಿಯ ಮಹಿಪಾಲ್‌ಪುರ ಪ್ರದೇಶದ ಹೋಟೆಲ್‌ನಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪುರುಷರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ಇನ್‌ಸ್ಟಾಗ್ರಾಮ್‌ನಲ್ಲಿ ಪರಿಚಯವಾದ ವ್ಯಕ್ತಿಯನ್ನು ಭೇಟಿಯಾಗಲು ಬ್ರಿಟನ್‌ನಿಂದ ದೆಹಲಿಗೆ ಬಂದಿದ್ದ ಮಹಿಳೆಗೆ ಹೋಟೆಲ್‌ನಲ್ಲಿ ಈ ದುರ್ಘಟನೆ ಸಂಭವಿಸಿದೆ. ಹೋಟೆಲ್‌ನಲ್ಲಿ ಆ ವ್ಯಕ್ತಿ ಆಕೆಯ ಮೇಲೆ ಅತ್ಯಾಚಾರ ಮಾಡಲು ಯತ್ನಿಸಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ.

ಬಳಿಕ ಮಹಿಳೆ ತಪ್ಪಿಸಿಕೊಂಡು ಹೋಟೆಲ್‌ನ ರಿಸೆಪ್ಷನ್‌ಗೆ ಬಂದಿದ್ದಾರೆ. ಅಲ್ಲಿಂದ ಹೊರಹೋಗಲು ಪ್ರಯತ್ನಿಸುವಾಗ ಲಿಫ್ಟ್‌ನಲ್ಲಿ ಮತ್ತೊಬ್ಬ ವ್ಯಕ್ತಿ ಆಕೆಯ ಮೇಲೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಬ್ರಿಟಿಷ್ ಹೈಕಮಿಷನ್‌ಗೆ ಮಾಹಿತಿ ನೀಡಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular