HomeKarnatakaBIG NEWS : ರಾಜ್ಯಾದ್ಯಂತ ಬಿಸಿಲಿನ ತಾಪ ಹೆಚ್ಚಳ : 'ಆರೋಗ್ಯ ಇಲಾಖೆ'ಯಿಂದ ಸಾರ್ವಜನಿಕರಿಗೆ ಮಹತ್ವದ...

BIG NEWS : ರಾಜ್ಯಾದ್ಯಂತ ಬಿಸಿಲಿನ ತಾಪ ಹೆಚ್ಚಳ : ‘ಆರೋಗ್ಯ ಇಲಾಖೆ’ಯಿಂದ ಸಾರ್ವಜನಿಕರಿಗೆ ಮಹತ್ವದ ಪ್ರಕಟಣೆ.!

ಬೆಂಗಳೂರು : ರಾಜ್ಯಾದ್ಯಂತ ಸೂರ್ಯನ ಶಾಖ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಏನು ಮಾಡಬೇಕೆಂದು ಆರೋಗ್ಯ ಇಲಾಖೆ ಮಹತ್ವದ ಪ್ರಕಟಣೆ ಹೊರಡಿಸಿದೆ.

ಸಾರ್ವಜನಿಕರು ರೇಡಿಯೋ, ಟಿವಿ ದಿನ ಪತ್ರಿಕೆಗಳಲ್ಲಿ ಬರುವ ಅತಿಯಾದ ಬಿಸಿಲಿನ ಕುರಿತು ಮುನ್ಸೂಚನೆಗಳನ್ನು ಪಡೆದುಕೊಳ್ಳುವುದು.

> ಬಾಯಾರಿಕೆಯಿಲ್ಲದಿದ್ದರೂ ಸಾಕಷ್ಟು ಮತ್ತು ಸಾಧ್ಯವಾದಷ್ಟು ಹೆಚ್ಚಾಗಿ ನೀರನ್ನು ಕುಡಿಯುವುದು.
> ಹಗುರವಾದ, ತಿಳಿ-ಬಣ್ಣದ, ಸಡಿಲವಾದ ಮತ್ತು ರಂಧ್ರವುಳ್ಳ ಹತ್ತಿ ಬಟ್ಟೆಗಳನ್ನು ಧರಿಸಿ.
> ಬಿಸಿಲಿನಲ್ಲಿ ಹೊರಗೆ ಹೋಗುವಾಗ ರಕ್ಷಣಾತ್ಮಕ ಕನ್ನಡಕಗಳು, ಟೋಪಿ, ಬೂಟಗಳು ಅಥವಾ ಚಪ್ಪಲಗಳನ್ನು ಬಳಸಿ.
> ಬಸ್ಸಿನಲ್ಲಿ ದೂರದ ಪ್ರಯಾಣವನ್ನು ರಾತ್ರಿ ವೇಳೆ ಮಾಡುವುದು ಉತ್ತಮ, ಒಂದು ವೇಳೆ ಪ್ರಯಾಣ ಮಾಡುವ ಸಂದರ್ಭ ಬಂದರೆ, ಪ್ರಯಾಣ ಮಾಡುವಾಗ, ನಿಮ್ಮೊಂದಿಗೆ ನೀರನ್ನು ಒಯ್ದಿರಿ. ನೀವು ಹೊರಗೆ ಕೆಲಸ ಮಾಡುತ್ತಿದ್ದರೆ, ಟೋಪಿ ಅಥವಾ ಛತ್ರಿಯನ್ನು ಬಳಸಿ ಮತ್ತು ನಿಮ್ಮ ತಲೆ, ಕುತ್ತಿಗೆ, ಮುಖ ಮತ್ತು ಕೈಕಾಲುಗಳ ಮೇಲೆ ಒದ್ದೆಯಾದ ಬಟ್ಟೆಯನ್ನು ಸಹ ಬಳಸಿ.
> ಮನೆಯಲ್ಲಿ ತಯಾರಿಸಿದ ಪಾನೀಯಗಳಾದ ಲಸ್ಸಿ, ಶರಬತ್, ನಿಂಬೆ ನೀರು, ಮಜ್ಜಿಗೆ ಇತ್ಯಾದಿಗಳನ್ನು ಬಳಸಿ ಅದು ದೇಹವನ್ನು ಪುನಃ ತಂಪಾಗಿಡಲು ಸಹಾಯ ಮಾಡುತ್ತದೆ.
> ಪ್ರಾಣಿ/ಪಕ್ಷಿಗಳನ್ನು ನೆರಳಿನಲ್ಲಿ ಇರಿಸಿ ಮತ್ತು ಅವುಗಳಿಗೆ ಕುಡಿಯಲು ಸಾಕಷ್ಟು ನೀರು ನೀಡಿ.
> ಆದಷ್ಟು ಫ್ಯಾನಗಳನ್ನು ಬಳಸಿ, ಒದ್ದೆಯಾದ ಬಟ್ಟೆಗಳನ್ನು ಮತ್ತು ಆಗಾಗ್ಗೆ ತಣ್ಣೀರಿನಲ್ಲಿ ಸ್ನಾನ ಮಾಡಿ. ಕೆಲಸದ ಸಮಯವನ್ನು ಆದಷ್ಟು ತಂಪಾದ ಸಮಯದಲ್ಲಿ ಮಾಡುವುದು ಹಾಗೂ ಕೆಲಸದ ಸ್ಥಳದ ಬಳಿ ತಂಪಾದ ಕುಡಿಯುವ ನೀರನ್ನು ಒದಗಿಸಿ.
> ಕೆಲಸ ನಿರ್ವಹಿಸುವ ಗರ್ಭಿಣಿ ಮಹಿಳೆಯರು ಮತ್ತು ಅನಾರೋಗ್ಯದಲ್ಲಿರುವ ಕಾರ್ಮಿಕರಿಗೆ ಹೆಚ್ಚಿನ ಗಮನ ನೀಡಬೇಕು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಲ್ಲಂಗಡಿ, ಕರಬೂಜ, ಕಿತ್ತಳೆ ದ್ರಾಕ್ಷಿ, ಅನನಾಸ್, ಸೌತೆಕಾಯಿ, ಎಳನೀರನ್ನು ಹೆಚ್ಚಾಗಿ ಸೇವಿಸಬೇಕು.
> ನವಜಾತ ಶಿಶುಗಳು ಹಾಗೂ ಚಿಕ್ಕ ಮಕ್ಕಳು, ಗರ್ಣಿಣಿಯರು, ಹೊರಾಂಗಣದಲ್ಲಿ ಕೆಲಸ ನಿರ್ವಹಿಸುವವರು, ಮಾನಸಿಕ ಸಮಸ್ಯೆಗಳಂದ ಬಳಲುತ್ತಿರುವವರ ಹಾಗೂ ಇತರ ಅರೋಗ್ಯ ಸಮಸ್ಯೆಗಳರುವವರು. ಅದರಲ್ಲೂ ವಿಶೇಷವಾಗಿ ಹೃದ್ರೋಗ ಹಾಗೂ ರಕ್ತದ ಒತ್ತಡದಿಂದ ಬಳಲುತ್ತಿರುವವರು ಜಾಗರೂಕತೆ ವಹಿಸಬೇಕು

ಸೂರ್ಯನ ಶಾಖ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು
ಏನು ಮಾಡಬಾರದು ಎಂಬುದರ ಆರೋಗ್ಯ ಇಲಾಖೆಯಿಂದ ಮಾಹಿತಿ”
> ಮಕ್ಕಳ ಅಥವಾ ಸಾಕುಪ್ರಾಣಿಗಳನ್ನು ಬಿಸಿಲಿನಲ್ಲಿ ನಿಲ್ಲಿಸಿದ ವಾಹಗಳ ಹತ್ತಿರ ಬಿಡಬೇಡಿ.
> ಕಪ್ಪು ಬಟ್ಟೆ ಅಥವಾ ಬಿಗಿಯಾದ ಬಟ್ಟೆಗಳನ್ನು ಧರಿಸುವುದನ್ನು ತಪ್ಪಿಸಿ.
> ಹೊರಗಿನ ತಾಪಮಾನ ಹೆಚ್ಚಾದಾಗ ಶ್ರಮದಾಯಕ ಚಟುವಟಿಕೆಗಳನ್ನು ತಪ್ಪಿಸಿ.
> ಮಧ್ಯಾಹ್ನ 12 ರಿಂದ ಮಧ್ಯಾಹ್ನ 3 ರವರೆಗೆ ಹೊರಗೆ ಕೆಲಸ ಮಾಡುವುದನ್ನು ತಪ್ಪಿಸಿ.
> ಬಿಸಿಲಿನ ಸಮಯದಲ್ಲಿ ಅಡುಗೆ ಮಾಡುವುದನ್ನು ತಪ್ಪಿಸಿ.
> ಅಡುಗೆ ಪ್ರದೇಶವನ್ನು ಸಮರ್ಪಕವಾಗಿ ಗಾಳಿಯಾಡಲು ಬಾಗಿಲು ಮತ್ತು ಕಿಟಕಿಗಳನ್ನು ತೆರೆಯಿರಿ.
> ದೇಹವನ್ನು ನಿರ್ಜಲೀಕರಣಗೊಳಿಸುವ ಆಳ್ಕೊಹಾಲ್, ಚಹಾ, ಕಾಫಿ ಮತ್ತು ಹಾನಿಕಾರಕ ತಂಪು ಪಾನೀಯಗಳನ್ನು ಸೇವಿಸಬೇಡಿ.
> ಹಾನಿಕಾರಕವಾದ ಆಹಾರ ಮತ್ತು ಹಳಸಿದ ಆಹಾರವನ್ನು ಸೇವಿಸಬೇಡಿ.
> ಬಿಸಿಲಿನಲ್ಲಿ, ಅಂದರೆ ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯವರೆಗೆ ಹೊರಹೋಗುವುದನ್ನು ತಪ್ಪಿಸಬೇಕು.
> ಈ ಸಂದರ್ಭದಲ್ಲಿ ಹೊರಾಂಗಣ ಚಟುವಟಿಕೆಗಳನ್ನು ಮಾಡಬಾರದು.
> ಚಪ್ಪಲಿ ಧರಿಸದೆ ಹೊರಹೋಗುವ ಅಭ್ಯಾಸವನ್ನು ತಪ್ಪಿಸಿ.
> ಮಧ್ಯಪಾನ, ಚಹಾ, ಕಾಫಿ ಮತ್ತು ಕಾಬೋನೇಟೆಡ್ ಪಾನೀಯಗಳು ಅಥವಾ ಹೆಚ್ಚು ಸಕ್ಕರೆ ಅಂಶವನ್ನು ಹೊಂದಿದ ಪಾನೀಯಗಳಂದ ದೂರವಿರಿ. ಇಂತಹ ಪಾನೀಯಗಳು ದೇಹವನ್ನು ನಿರ್ಜಲೀಕರಣಗೊಳಿಸುತ್ತವೆ ಅಥವಾ ಹೊಟ್ಟೆ ನೋವನ್ನು ಉಂಟುಮಾಡುತ್ತವೆ.
> ಹೆಚ್ಚು ಪ್ರೋಟೀನ್ಭರಿತವಾದ ಹಾಗೂ ಹಳೆಯದಾದ ಆಹಾರ ಪದಾರ್ಥಗಳನ್ನು ಸೇವಿಸಬೇಡಿ.
> ಮಕ್ಕಳ ಅಥವಾ ಸಾಕು ಪ್ರಾಣಿಗಳನ್ನು ನಿಲುಗಡೆ ಮಾಡಿರುವ ವಾಹನಗಳಲ್ಲಿ ಬಿಡಿಬೇಡಿ. ವಾಹನಗಳ ಒಳಾಂಗಣದಲ್ಲಿನ ಹೆಚ್ಚಿನ ತಾಪಮಾನವು ಅವರಿಗೆ/ಅವುಗಳಿಗೆ ಅಪಾಯಕಾರಿಯಾಗಬಹುದು.
> ಇಷ್ಟೇ ಅಲ್ಲದೆ ಕೆಲಸದ ಸ್ಥಳಗಳಲ್ಲಿ ಮಾಡಬೇಕಾದ ವ್ಯವಸ್ಥೆಗಳೂ ಸೇರಿದಂತೆ ಇನ್ನೂ ಅನೇಕ ಸಲಹೆ ಸೂಚನೆಗಳನ್ನು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಆರೋಗ್ಯ ಇಲಾಖೆಯಿಂದ ಸಲಹೆ ಸೂಚನೆಗಳನ್ನೂ ನೀಡಲಾಗುತ್ತದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular