CBSE‌ ವಿದ್ಯಾರ್ಥಿ ವೇತನದ ಕುರಿತು ಇಲ್ಲಿದೆ ಮಾಹಿತಿ

CBSE 10 ಮತ್ತು 12ನೇ ತರಗತಿಯ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶದ ಸುದ್ದಿ ಇಲ್ಲಿದೆ ! CBSE ಮಂಡಳಿಯು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡಲು ಹಲವು ವಿದ್ಯಾರ್ಥಿವೇತನಗಳನ್ನು ನೀಡುತ್ತಿದೆ. ಬೋರ್ಡ್ಸ್ ಮೆರಿಟ್ ಸ್ಕಾಲರ್‌ಶಿಪ್ (BMS) ಅಡಿಯಲ್ಲಿ 10 ಮತ್ತು 12ನೇ ತರಗತಿಯ ವಿದ್ಯಾರ್ಥಿಗಳಿಗೆ ವಾರ್ಷಿಕ ₹12,000 ನೀಡಲಾಗುವುದು.

ಯಾರು ಅರ್ಹರು?

  • ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡ (ST) ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
  • CBSE 10 ಅಥವಾ 12ನೇ ತರಗತಿ ಪರೀಕ್ಷೆಯಲ್ಲಿ ಕನಿಷ್ಠ 85% ಅಂಕ ಗಳಿಸಿರಬೇಕು.

ಇದರ ಜೊತೆಗೆ, CBSE ಏಕ ಹೆಣ್ಣು ಮಗು ವಿದ್ಯಾರ್ಥಿವೇತನವನ್ನೂ ನೀಡುತ್ತಿದೆ. 11 ಮತ್ತು 12ನೇ ತರಗತಿಯಲ್ಲಿ ಓದುತ್ತಿರುವ ಹೆಣ್ಣು ಮಕ್ಕಳು ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದು. 10ನೇ ತರಗತಿಯಲ್ಲಿ 70% ಕ್ಕಿಂತ ಹೆಚ್ಚು ಅಂಕ ಗಳಿಸಿರಬೇಕು. ಮತ್ತು ಕುಟುಂಬದ ವಾರ್ಷಿಕ ಆದಾಯ 8 ಲಕ್ಷಕ್ಕಿಂತ ಕಡಿಮೆ ಇರಬೇಕು. ಆಯ್ಕೆಯಾದ ವಿದ್ಯಾರ್ಥಿಗಳಿಗೆ ತಿಂಗಳಿಗೆ 500 ರೂ ನೀಡಲಾಗುತ್ತದೆ.

ಕಾಲೇಜು ಮತ್ತು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಕೇಂದ್ರ ವಲಯದ ವಿದ್ಯಾರ್ಥಿವೇತನ ಯೋಜನೆಯಡಿ 12ನೇ ತರಗತಿಯಲ್ಲಿ 80% ಗಿಂತ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಕುಟುಂಬದ ವಾರ್ಷಿಕ ಆದಾಯ 5 ಲಕ್ಷಕ್ಕಿಂತ ಕಡಿಮೆ ಇರಬೇಕು. ಈ ವಿದ್ಯಾರ್ಥಿವೇತನದಡಿ ಮೂರು ವರ್ಷಗಳ ವರೆಗೆ 12 ಸಾವಿರ ಮತ್ತು ನಂತರ 20 ಸಾವಿರ ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ CBSE ಅಧಿಕೃತ ವೆಬ್‌ಸೈಟ್ cbse.gov.in ಗೆ ಭೇಟಿ ನೀಡಿ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read