HomeKarnatakaರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆ: ಇಂದಿನಿಂದ ಒಂದು ವಾರ ಮಳೆ ಮುನ್ಸೂಚನೆ

ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆ: ಇಂದಿನಿಂದ ಒಂದು ವಾರ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಬಿರು ಬಿಸಿಲಿನ ನಡುವೆ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಿದೆ. ಚಿಕ್ಕಮಗಳೂರು, ಉಡುಪಿ, ಶಿವಮೊಗ್ಗ, ದಾವಣಗೆರೆ, ವಿಜಯನಗರ, ಹಾವೇರಿ, ಗದಗ ಜಿಲ್ಲೆಯ ಹಲವು ಕಡೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗಿದೆ.

ಇನ್ನು ಶುಕ್ರವಾರದಿಂದ ಒಂದು ವಾರ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶ್ರೀಲಂಕಾ, ಬಂಗಾಳಕೊಲ್ಲಿ ಭಾಗದಲ್ಲಿ ಮಳೆ ಮಾರುತಗಳು ಸೃಷ್ಟಿಯಾಗುತ್ತಿವೆ. ಬಿಸಿಲು ಕೂನ ಹೆಚ್ಚಳವಾಗುತ್ತಿದೆ. ಇದರಿಂದಾಗಿ ಮಳೆಯಾಗುವ ಸಾಧ್ಯತೆ ಇದೆ.

ಶುಕ್ರವಾರದಿಂದ ಅಲ್ಲಲ್ಲಿ ಮಳೆಯಾಗಲಿದ್ದು ಮಾರ್ಚ್ 23, 24ರಂದು ಹೆಚ್ಚಿನ ಪ್ರದೇಶದಲ್ಲಿ ಚದುರಿದಂತೆ ಮಳೆ ಆಗಲಿದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular