HomeKarnatakaಸ್ಮಶಾನಕ್ಕೆ ತೆರಳಲು ಸಾಧ್ಯವಾಗದೆ ರಸ್ತೆಯಲ್ಲೇ ಅಂತ್ಯಸಂಸ್ಕಾರ

ಸ್ಮಶಾನಕ್ಕೆ ತೆರಳಲು ಸಾಧ್ಯವಾಗದೆ ರಸ್ತೆಯಲ್ಲೇ ಅಂತ್ಯಸಂಸ್ಕಾರ

ಶ್ರೀರಂಗಪಟ್ಟಣ: ಸ್ಮಶಾನಕ್ಕೆ ತೆರಳಲು ಸಾಧ್ಯವಾಗದೆ ವ್ಯಕ್ತಿಯ ಶವವನ್ನು ರಸ್ತೆ ಮಧ್ಯದಲ್ಲಿ ಅಂತ್ಯ ಸಂಸ್ಕಾರ ಮಾಡಿದ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಹೆಬ್ಬಾಡಿಹುಂಡಿ ಗ್ರಾಮದಲ್ಲಿ ನಡೆದಿದೆ.

42 ವರ್ಷದ ಸತೀಶ್ ಎಂಬುವರು ಮೃತಪಟ್ಟಿದ್ದು, ಅಂತ್ಯಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಆದರೆ, ಅದೇ ಗ್ರಾಮದ ರೈತರಿಬ್ಬರು ಜಗಳವಾಡಿಕೊಂಡು ತಮ್ಮ ಜಮೀನುಗಳಿಗೆ ಮುಳ್ಳು ತಂತಿ ಬೇಲಿ ಹಾಕಿಕೊಂಡಿದ್ದರಿಂದ ಸ್ಮಶಾನಕ್ಕೆ ಹೋಗುವ ರಸ್ತೆ ಸಂಪೂರ್ಣ ಬಂದ್ ಆಗಿದೆ. ಹೀಗಾಗಿ ಸ್ಮಶಾನಕ್ಕೆ ಶವ ತೆಗೆದುಕೊಂಡು ಹೋಗಲು ಸಾಧ್ಯವಾಗದೇ ರಸ್ತೆಯಲ್ಲಿಯೇ ಮೃತದೇಹವನ್ನು ಸುಟ್ಟು ಅಂತ್ಯಸಂಸ್ಕಾರ ಮಾಡಿದ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular