HomeKarnatakaBIG NEWS : ಪೋಷಕರೇ ಗಮನಿಸಿ : ರಾಜ್ಯದ ವಸತಿ ಶಾಲೆಗಳಲ್ಲಿ 6 ನೇ ತರಗತಿ...

BIG NEWS : ಪೋಷಕರೇ ಗಮನಿಸಿ : ರಾಜ್ಯದ ವಸತಿ ಶಾಲೆಗಳಲ್ಲಿ 6 ನೇ ತರಗತಿ ಉಚಿತ ಪ್ರವೇಶಾತಿಗೆ ಅರ್ಜಿ ಆಹ್ವಾನ

2025-26 ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ (ರಾಜ್ಯ ಪಠ್ಯಕ್ರಮ) ಮತ್ತು ಡಾ.ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಗಳ 6 ನೇ ತರಗತಿಗೆ ಉಚಿತ (ಸಿಬಿಎಸ್‍ಇ) (ಆಂಗ್ಲ ಮಾಧ್ಯಮ) ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಅಲ್ಪಸಂಖ್ಯಾತರ ಸಮುದಾಯದ ಸಿಖ್, ಬೌದ್ಧ , ಜೈನ್, ಕ್ರಿಶ್ಚಿಯನ್, ಮುಸ್ಲಿಂ ಮತ್ತು ಪಾರ್ಸಿ ಶೇ.75 ಪರಿಶಿಷ್ಟ ಜಾತಿ, ಪರಿಶಿಷ್ಠ ವರ್ಗ ಹಾಗೂ ಇತರೆ ಹಿಂದುಳಿದ ವರ್ಗದವರಿಗೆ ಶೇ.25 ಸೀಟುಗಳು ಲಭ್ಯವಿರುತ್ತದೆ. ಉಚಿತ ಶಿಕ್ಷಣ ಮತ್ತು ವಸತಿ ಸೌಲಭ್ಯವಿದ್ದು, https://sevasindhuservices.karnataka.gov.in ಅಡಿಯಲ್ಲಿ ಪ್ರಾರಂಭಿಸಲಾಗಿದ್ದು, ಅದರಂತೆ ಸೇವಾ ಸಿಂಧು ಪೋರ್ಟಲ್‍ನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ‘ಅಡಿಮಿಷನ್ ಫಾರ್ ಮೊರಾರ್ಜಿ ದೇಸಾಯಿ ರೆಸಿಡೆನ್ಸಿಯಲ್ ಸ್ಕೂಲ್ಸ್’ ಸೇವೆಯ ವೆಬ್ ಪೋರ್ಟಲ್‍ನಲ್ಲಿ ಅರ್ಹ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಕೂಡಲೇ ಇದರ ಸದುಪಯೋಗಪಡಿಸಿಕೊಳ್ಳಲು ಕೋರಿದೆ. ಅರ್ಜಿ ಸಲ್ಲಿಸಲು ಏಪ್ರಿಲ್, 10 ರವರೆಗೆ ವಿಸ್ತರಿಸಲಾಗಿದೆ.

ವಸತಿ ಶಾಲೆಯಲ್ಲಿ ಪ್ರತಿ ವಿದ್ಯಾರ್ಥಿಗೆ ಉಚಿತ ಊಟ ಮತ್ತು ವಸತಿ ಸೌಲಭ್ಯದೊಂದಿಗೆ ಉಚಿತ ಶಿಕ್ಷಣ, ಪ್ರತಿ ವಿದ್ಯಾರ್ಥಿಗೆ ಉಚಿತವಾಗಿ ವರ್ಷಕ್ಕೆ ಸಮವಸ್ತ್ರ, ಬೂಟು, ಕಾಲು ಚೀಲ ಪೂರೈಕೆ, ಪ್ರತಿ ಬಾಲಕ ವಿದ್ಯಾರ್ಥಿಗೆ ಎರಡು ತಿಂಗಳಿಗೊಮ್ಮೆ ಕ್ಷೌರದ ವ್ಯವಸ್ಥೆ, ಪ್ರತಿ ವಿದ್ಯಾರ್ಥಿಗೆ ಪಠ್ಯ ಪುಸ್ತಕ ಮತ್ತು ಲೇಖನ ಸಾಮಾಗ್ರಿ ನೀಡಿಕೆ, ಪ್ರತಿ ವಿದ್ಯಾರ್ಥಿಗೆ ಟೂತ್‍ಪೇಸ್ಟ್, ಸೋಪ್, ಬ್ರಷ್, ಎಣ್ಣೆ ಒಳಗೊಂಡ ಸೋಪ್ ಕಿಟ್ ವಿತರಣೆ, ಪ್ರತಿ ವಿದ್ಯಾರ್ಥಿಗೆ ಉಚಿತವಾಗಿ ವೈದ್ಯಕೀಯ ಸೌಲಭ್ಯ, ಹಾಸಿಗೆ ಹೊದಿಕೆ, ಟ್ರಂಕ್, ಮಂಚ, ಪ್ರಯೋಗ ಶಾಲೆ ಉಪಕರಣ, ಬೋಧನ ಸಲಕರಣೆ, ಕ್ರೀಡಾ ಸಾಮಾಗ್ರಿ, ಗ್ರಂಥಾಲಯಗಳನ್ನು ಒದಗಿಸಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗೆ ಪ್ರಾಂಶುಪಾಲರು, ಡಾ.ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ, ಖ್ಯಾತೆ ಗ್ರಾಮ,ಕೊಡ್ಲಿಪೇಟೆ, ಸೋಮವಾರಪೇಟೆ ತಾಲ್ಲೂಕು ದೂರವಾಣಿ ಸಂಖ್ಯೆ: 7676473767, ಪ್ರಾಂಶುಪಾಲರು, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಅರ್ಜಿ ಗ್ರಾಮ, ಪೆರಂಬಾಡಿ, ವಿರಾಜಪೇಟೆ ತಾಲ್ಲೂಕು ದೂರವಾಣಿ ಸಂಖ್ಯೆ: 8105409405, ತಾಲ್ಲೂಕು ಮಾಹಿತಿ ಕೇಂದ್ರ ಸೋಮವಾರಪೇಟೆ ದೂರವಾಣಿ ಸಂಖ್ಯೆ: 8548068519, ತಾಲ್ಲೂಕು ಮಾಹಿತಿ ಕೇಂದ್ರ ವಿರಾಜಪೇಟೆ ದೂರವಾಣಿ ಸಂಖ್ಯೆ 9900731037 ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಆರ್.ಕೃಷ್ಣಮೂರ್ತಿ ಅವರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular