HomeKarnatakaBIG NEWS : ಇಂದು 20 ಸಾವಿರ ಕೋಟಿ.ರೂಗಳ 'BBMP ಬಜೆಟ್' ಮಂಡನೆ |BBMP Budget...

BIG NEWS : ಇಂದು 20 ಸಾವಿರ ಕೋಟಿ.ರೂಗಳ ‘BBMP ಬಜೆಟ್’ ಮಂಡನೆ |BBMP Budget 2025

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಬಜೆಟ್ ಇಂದು ಮಂಡನೆಯಾಗಲಿದೆ. ಸುಮಾರು 20,000 ಕೋಟಿ ರೂಗಳ ಬಜೆಟ್ ನ್ನು ಮಂಡಿಸಲಾಗುತ್ತಿದೆ.

ಭಾಷಣವನ್ನು ಶನಿವಾರ ಬೆಳಿಗ್ಗೆ 11 ಗಂಟೆಗೆ ಯೂಟ್ಯೂಬ್ ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ಬಿಬಿಎಂಪಿಯ ಆಡಳಿತಾಧಿಕಾರಿ ಉಮಾಶಂಕರ್, ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸಮಕ್ಷಮದಲ್ಲಿ ಹಣಕಾಸು ವಿಭಾಗದ ವಿಶೇಷ ಆಯುಕ್ತ ಡಾ। ಹರೀಶ್ ಕುಮಾರ್ ಸುಮಾರು 45 ರಿಂದ 50 ನಿಮಿಷ ಆಯವ್ಯಯದ ಭಾಷಣ ಮಂಡಿಸಲಿದ್ದಾರೆ.

ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮತ್ತು ಆಡಳಿತಾಧಿಕಾರಿ ಎಸ್.ಆರ್.ಉಮಾಶಂಕರ್ ಅವರ ಸಮ್ಮುಖದಲ್ಲಿ ಬಿಬಿಎಂಪಿ ವಿಶೇಷ ಆಯುಕ್ತ (ಹಣಕಾಸು) ಹರೀಶ್ ಕುಮಾರ್ ಬಜೆಟ್ ಮಂಡಿಸಲಿದ್ದಾರೆ. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಬಿಎಂಪಿ 2024-25ನೇ ಸಾಲಿನ ಆಯವ್ಯಯದ ಆಧಾರದ ಮೇಲೆ ಕೈಗೊಂಡ ಕ್ರಮಗಳ ವರದಿಯನ್ನು ಮಂಡಿಸಲಿದೆ. ರಾಜ್ಯ ಸರ್ಕಾರದಿಂದ ನಾವು 4,000 ಕೋಟಿ ರೂ.ಗಳ ಹೆಚ್ಚುವರಿ ಹಂಚಿಕೆಯನ್ನು ಪಡೆದಿರುವುದರಿಂದ ಒಟ್ಟು ಬಜೆಟ್ ಗಾತ್ರ ಹೆಚ್ಚಾಗುತ್ತದೆ. ನಾವು ವಿಶ್ವ ಬ್ಯಾಂಕ್ ಅನುದಾನ ಮತ್ತು ಇತರ ಆದಾಯದ ಮೂಲಗಳನ್ನು ಸಹ ಸೇರಿಸುತ್ತೇವೆ” ಎಂದು ಅವರು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular