HomeKarnataka105 ಬೇನಾಮಿ ಖಾತೆ ತೆರೆದು ನಕಲಿ ಚಿನ್ನ ಒತ್ತೆ ಇಟ್ಟು 11 ಕೋಟಿ ದೋಚಿದ ಬ್ಯಾಂಕ್...

105 ಬೇನಾಮಿ ಖಾತೆ ತೆರೆದು ನಕಲಿ ಚಿನ್ನ ಒತ್ತೆ ಇಟ್ಟು 11 ಕೋಟಿ ದೋಚಿದ ಬ್ಯಾಂಕ್ ಮ್ಯಾನೇಜರ್

ರಾಯಚೂರು: ಬೇನಾಮಿ ಹೆಸರಲ್ಲಿ ಬ್ಯಾಂಕ್ ಖಾತೆಗಳನ್ನು ತೆರೆದು ನಕಲಿ ಚಿನ್ನ ಒತ್ತೆ ಇಟ್ಟು ಅದರ ಮೇಲೆ ಸಾಲ ಪಡೆದ ಬ್ಯಾಂಕ್ ಮ್ಯಾನೇಜರ್ 10.97 ಕೋಟಿ ರೂ. ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ.

ಬ್ಯಾಂಕ್ ಆಫ್ ಮಹಾರಾಷ್ಟ್ರ ಶಾಖೆಯ ವ್ಯವಸ್ಥಾಪಕ ಕೆ. ನರೇಂದ್ರ ರೆಡ್ಡಿ ವಂಚನೆ ಮಾಡಿದ ಆರೋಪಿ. ಕಳೆದ ಮೂರು ವರ್ಷಗಳಿಂದ ಬೇನಾಮಿ ಹೆಸರುಗಳಲ್ಲಿ 105 ಖಾತೆಗಳನ್ನು ತೆರೆದು ಆ ಖಾತೆಗಳ ಮೂಲಕ ನಕಲಿ ಚಿನ್ನವನ್ನು ಅಡವಿಟ್ಟು, ಸುಮಾರು 10.97 ಕೋಟಿ ಸಾಲವನ್ನು ಬೇನಾಮಿ ಖಾತೆಗಳಿಗೆ ವರ್ಗಾವಣೆ ಮಾಡಿದ್ದು, ಇದೀಗ ಬ್ಯಾಂಕ್ ಲೆಕ್ಕ ಪರಿಶೋಧನೆಯ ಸಂದರ್ಭದಲ್ಲಿ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ.

ನಕಲಿ ಚಿನ್ನ ಸಾಲ ಖಾತೆಗಳಿಂದ 8 ಸಂಬಂಧಿಕರ ಖಾತೆಗೆ ಆರೋಪಿ ಹಣ ವರ್ಗಾಯಿಸಿದ್ದಾರೆ. ಹಿಂದಿನ ಬ್ಯಾಂಕ್ ಸಹೋದ್ಯೋಗಿ ಹೆಸರಿಗೆ 88 ಲಕ್ಷ ರೂ. ವರ್ಗಾವಣೆ ಮಾಡಿದ್ದಾರೆ. ವಂಚನೆ ಪ್ರಕರಣ ಬಯಲಾಗುತ್ತಿದ್ದಂತೆ ವ್ಯವಸ್ಥಾಪಕ ನರೇಂದ್ರ ರೆಡ್ಡಿ ಪರಾರಿಯಾಗಿದ್ದಾರೆ. ಬ್ಯಾಂಕ್ ಆಫ್ ಮಹಾರಾಷ್ಟ್ರ ಪ್ರಾದೇಶಿಕ ವ್ಯವಸ್ಥಾಪಕ ಸುಚೇತ್ ರಾಯಚೂರು ಸೈಬರ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular