HomeAgricultureಬಗರ್ ಹುಕುಂ ಸಾಗುವಳಿದಾರರಿಗೆ ಸಿಹಿ ಸುದ್ದಿ: ಎಲ್ಲಾ ಅರ್ಹರಿಗೆ ಆರು ತಿಂಗಳಲ್ಲಿ ಜಮೀನು ಮಂಜೂರಿಗೆ ಗಡುವು

ಬಗರ್ ಹುಕುಂ ಸಾಗುವಳಿದಾರರಿಗೆ ಸಿಹಿ ಸುದ್ದಿ: ಎಲ್ಲಾ ಅರ್ಹರಿಗೆ ಆರು ತಿಂಗಳಲ್ಲಿ ಜಮೀನು ಮಂಜೂರಿಗೆ ಗಡುವು

ಬೆಂಗಳೂರು: ಬಗರ್ ಹುಕುಂ ಯೋಜನೆಯಡಿ ಅರ್ಹ ರೈತರಿಗೆ ಭೂ ಮಂಜೂರು ಮಾಡುವ ಕೆಲಸ ನಿರೀಕ್ಷಿತ ಮಟ್ಟದಲ್ಲಿ ನಡೆಯುತ್ತಿಲ್ಲ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಸಮಾಧಾನ ವ್ಯಕ್ತಪಡಿಸಿದ್ದು, ಆರು ತಿಂಗಳಲ್ಲಿ ಎಲ್ಲಾ ಅರ್ಹರಿಗೆ ಜಮೀನು ಮಂಜೂರು ಮಾಡಬೇಕು ಎಂದು ತಹಶೀಲ್ದಾರ್ ಗಳಿಗೆ ಸೂಚನೆ ನೀಡಿದ್ದಾರೆ.

ಶುಕ್ರವಾರ ತಹಶಿಲ್ದಾರ್ ಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಅವರು, ಬಗರ್ ಹುಕುಂ ಬಡವರ ಕೆಲಸವೆಂದು ಕೆಲವು ಅಧಿಕಾರಿಗಳು ಅಸಡ್ಡೆ ತೋರಿಸುತ್ತಿದ್ದಾರೆ. 15 ದಿನಗಳಿಗೊಮ್ಮೆ ಶಾಸಕರ ನೇತೃತ್ವದಲ್ಲಿ ಸಭೆ ನಡೆಸಿ ಅರ್ಹರಿಗೆ ಜಮೀನು ಮಂಜೂರು ಮಾಡಬೇಕು ಎಂದು ಸೂಚನೆ ನೀಡಿದ್ದಾರೆ.

ತಮ್ಮ ಪಾಲಿನ ಜಮೀನು ಇದ್ದರೂ ಫೋಡಿಯಾಗದೆ ರೈತರು ಸರ್ಕಾರಿ ಕಚೇರಿಗಳಿಗೆ ಅಲೆದಾಡುತ್ತಿದ್ದಾರೆ. ತಹಶೀಲ್ದಾರರು ನಿಗದಿತ ಜಮೀನಿಗೆ ಸಂಬಂಧಿಸಿದ ದಾಖಲೆಯನ್ನು ಸಿದ್ಧಪಡಿಸಿ ಮುಂದಿನ ಹಂತದ ನಮೂನೆಗೆ ಭೂಮಾನ ಇಲಾಖೆಗೆ ಕಡತ ಕಳಿಸಬೇಕು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular