ಬೆಂಗಳೂರು : ಏ.3 ರವರೆಗೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆರಾಯ ಅಬ್ಬರಿಸಲಿದ್ದಾನೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವು ಕಡೆ ಭಾರಿ ಮಳೆಯಾಗುತ್ತಿದ್ದು, ಇನ್ನೂ 1 ವಾರ ಚಿಕ್ಕಮಗಳೂರು, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು,ಹಾಸನ, ಮೈಸೂರಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಬೆಂಗಳೂರಿನಲ್ಲೂ ಮಳೆಯಾಗುವ ಸಾಧ್ಯತೆಯಿದ್ದು, ಮೋಡ ಕವಿದ ವಾತಾವರಣವಿರಲಿದೆ.
ರಾಜ್ಯದ ಕೆಲವು ಭಾಗದಲ್ಲಿ ಕಾದ ಭೂಮಿ ತಂಪಾಗಿದ್ದರೆ, ಕೆಲವು ಭಾಗದಲ್ಲಿ ಇನ್ನೂ ಮಳೆರಾಯ ಕೃಪೆ ತೋರಿಲ್ಲ. ಮಲೆನಾಡಿನ ಭಾಗದಲ್ಲಿ ಕಳೆದ 1 ವಾರದಿಂದ ಭರ್ಜರಿ ಮಳೆಯಾಗಿದ್ದು, ರೈತರು ಫುಲ್ ಖುಷ್ ಆಗಿದ್ದಾರೆ.

