ಚಿತ್ರದುರ್ಗ : ಚಿತ್ರದುರ್ಗದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಟಿಟಿ ವಾಹನ ಪಲ್ಟಿಯಾಗಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗರೆ ಸಮೀಪ ಈ ಅಪಘಾತ ಸಂಭವಿಸಿದೆ. ವೇಗವಾಗಿ ಚಲಿಸುತ್ತಿದ್ದ ಟಿಟಿ ವಾಹನ ಪಲ್ಟಿಯಾಗಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ಶಂಕರಿ ಬಾಯಿ (65) ಕುಮಾರ ನಾಯಕ್ (46) ಶ್ವೇತ (38) ಸೇರಿ ಮೂವರು ದುರ್ಮರಣಕ್ಕೀಡಾಗಿದ್ದಾರೆ.ಅಪಘಾತದಲ್ಲಿ ಐವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

