HomeAutoರಸ್ತೆಯಲ್ಲಿ ನಿಂತಿದ್ದ ಶಿಕ್ಷಕನಿಗೆ ಕಾರು ಡಿಕ್ಕಿ ; ಸಿಸಿ ಟಿವಿಯಲ್ಲಿ ಭಯಾನಕ ದೃಶ್ಯ ಸೆರೆ |...

ರಸ್ತೆಯಲ್ಲಿ ನಿಂತಿದ್ದ ಶಿಕ್ಷಕನಿಗೆ ಕಾರು ಡಿಕ್ಕಿ ; ಸಿಸಿ ಟಿವಿಯಲ್ಲಿ ಭಯಾನಕ ದೃಶ್ಯ ಸೆರೆ | Watch

ತಮಿಳುನಾಡಿನ ಸೇಲಂನಲ್ಲಿ ಶನಿವಾರ ಭೀಕರ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಕಾರೊಂದು ರಸ್ತೆಯಲ್ಲಿ ನಿಂತಿದ್ದ ಶಿಕ್ಷಕನಿಗೆ ಡಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಘಟನೆ ಸಿಸಿ ಟಿವಿಯಲ್ಲಿ ದಾಖಲಾಗಿದ್ದು, ಆಘಾತಕಾರಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವರದಿಯ ಪ್ರಕಾರ, ಶಿಕ್ಷಕ ಮತ್ತು ಮಹಿಳೆ ರಸ್ತೆಯ ಬದಿಯಲ್ಲಿ ನಿಂತಿದ್ದರು. ಆ ವೇಳೆ ವೇಗವಾಗಿ ಬಂದ ಕಾರು ನಿಯಂತ್ರಣ ತಪ್ಪಿ ಶಿಕ್ಷಕನ ಬೈಕಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಶಿಕ್ಷಕ ಹಲವಾರು ಮೀಟರ್ ದೂರಕ್ಕೆ ಎಸೆಯಲ್ಪಟ್ಟಿದ್ದಾರೆ. ಮಹಿಳೆ ಮತ್ತು ಸ್ಥಳೀಯರು ಸಹಾಯಕ್ಕೆ ಧಾವಿಸಿದರೂ, ಚಾಲಕ ಕಾರನ್ನು ನಿಲ್ಲಿಸದೆ ಪರಾರಿಯಾಗಿದ್ದಾನೆ.

ಇದೇ ರೀತಿಯ ಘಟನೆಯೊಂದು ಕಳೆದ ವಾರ ಮುಂಬೈನ ಘಾಟ್‌ಕೋಪರ್‌ನಲ್ಲಿ ನಡೆದಿದೆ. ಮಾರ್ಚ್ 22 ರಂದು ಲಾಲ್ ಬಹದ್ದೂರ್ ಶಾಸ್ತ್ರಿ (ಎಲ್‌ಬಿಎಸ್) ರಸ್ತೆಯಲ್ಲಿ ವೇಗವಾಗಿ ಬಂದ ಕಾರು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಪ್ರಿನ್ಸ್ ಚೌಧರಿ ಸಾವನ್ನಪ್ಪಿದ್ದಾರೆ. ಅವರು ಝೆಪ್ಟೋ ಡೆಲಿವರಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಈ ಸಂಬಂಧ ಘಾಟ್‌ಕೋಪರ್ ಪೊಲೀಸರು ಕಾರು ಚಾಲಕನನ್ನು ಬಂಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular