HomeAgriculture12 ಗುಂಟೆ ಅರಣ್ಯ ಪ್ರದೇಶ ಒತ್ತುವರಿ ಮಾಡಿದ ವ್ಯಕ್ತಿಗೆ ಒಂದು ವರ್ಷ ಜೈಲು, 5 ಸಾವಿರ...

12 ಗುಂಟೆ ಅರಣ್ಯ ಪ್ರದೇಶ ಒತ್ತುವರಿ ಮಾಡಿದ ವ್ಯಕ್ತಿಗೆ ಒಂದು ವರ್ಷ ಜೈಲು, 5 ಸಾವಿರ ರೂ. ದಂಡ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಮೀಸಲು ಅರಣ್ಯ ಪ್ರದೇಶದ ಒತ್ತುವರಿ ಮಾಡಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಮೇಲಿನ ಕುರುವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಣಸವಳ್ಳಿ ಗ್ರಾಮದ ಹೆಚ್.ಡಿ. ಉಮೇಶ್(43) ಅವರಿಗೆ ಒಂದು ವರ್ಷ ಸಾದಾ ಜೈಲು ಶಿಕ್ಷೆ 5 ಸಾವಿರ ರೂ. ದಂಡ ವಿಧಿಸಿ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.

ಹುಣಸವಳ್ಳಿ ಗ್ರಾಮದ ಸರ್ವೆ ನಂಬರ್ 13ರಲ್ಲಿ ಉಮೇಶ್ 12 ಗುಂಟೆ ಅರಣ್ಯ ಪ್ರದೇಶ ಒತ್ತುವರಿ ಮಾಡಿದ ಕುರಿತಂತೆ ತೀರ್ಥಹಳ್ಳಿ ವಲಯ ಅರಣ್ಯ ಅಧಿಕಾರಿ 2019 ರಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದರು. ವಿಶೇಷ ನ್ಯಾಯಾಲಯದ ನ್ಯಾಯಿಕ ಸದಸ್ಯರಾದ ಪಾಟೀಲ ನಾಗಲಿಂಗನಗೌಡ, ಕಂದಾಯ ಸದಸ್ಯ ಕೆ.ಹೆಚ್. ಅಶ್ವತ್ಥ್ ನಾರಾಯಣಗೌಡ ನೇತೃತ್ವದ ಪೀಠ ವಿಚಾರಣೆ ನಡೆಸಿ ಮಾರ್ಚ್ 3ರಂದು ತೀರ್ಪು ನೀಡಿದೆ.

ಒತ್ತುವರಿ ಮಾಡಿರುವ ಉಮೇಶ್ ದಂಡ ಪಾವತಿಸಲು ವಿಫಲವಾದಲ್ಲಿ ಮೂರು ತಿಂಗಳು ಸಾದಾ ಜೈಲು ಶಿಕ್ಷೆ ಅನುಭವಿಸಬೇಕು. ಕೂಡಲೇ ಒತ್ತುವರಿ ಜಮೀನು ತೆರವು ಮಾಡಬೇಕು. 60 ದಿನದೊಳಗೆ ಈ ಕುರಿತು ವರದಿ ಸಲ್ಲಿಸಬೇಕು ಎಂದು ವಲಯ ಅರಣ್ಯ ಅಧಿಕಾರಿಗೆ ನ್ಯಾಯ ಪೀಠ ಆದೇಶಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular