HomeKarnatakaBREAKING: ಇಂದು ಶ್ರೀ ಶಿವಕುಮಾರ ಸ್ವಾಮೀಜಿ ಜನ್ಮದಿನೋತ್ಸವ ಹಿನ್ನಲೆ ವಿಶೇಷ ಪೂಜೆ, ರಕ್ಷಣಾ ಸಚಿವ ರಾಜನಾಥ್...

BREAKING: ಇಂದು ಶ್ರೀ ಶಿವಕುಮಾರ ಸ್ವಾಮೀಜಿ ಜನ್ಮದಿನೋತ್ಸವ ಹಿನ್ನಲೆ ವಿಶೇಷ ಪೂಜೆ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾಗಿ

ತುಮಕೂರು: ಇಂದು ತುಮಕೂರಿನ ಸಿದ್ಧಗಂಗಾ ಮಠದ ಲಿಂ. ಶ್ರೀ ಶಿವಕುಮಾರ ಸ್ವಾಮೀಜಿಗಳ 118ನೇ ಜನ್ಮದಿನೋತ್ಸವ ತುಮಕೂರಿನ ಸಿದ್ದಗಂಗಾ ಮಠದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾಗವಹಿಸಲಿದ್ದಾರೆ.

ಶಿವಕುಮಾರ ಸ್ವಾಮೀಜಿಗಳ ಗದ್ದುಗೆ ವಿಶೇಷ ಅಲಂಕಾರ ಮಾಡಲಾಗಿದೆ. ಬೆಳಗಿನ ಜಾವ ವಿಶೇಷ ಪೂಜೆ, ರುದ್ರಾಭಿಷೇಕ, ಮಹಾಮಂಗಳಾರತಿ ನೆರವೇರಿಸಲಾಗಿದೆ. ಪೂಜೆಯಲ್ಲಿ ಸಿದ್ದಲಿಂಗ ಸ್ವಾಮೀಜಿ ಹಾಗೂ ವಿವಿಧ ಮಠಾಧೀಶರು ಭಾಗವಹಿಸಿದ್ದಾರೆ.

ಬೆಳಗ್ಗೆ 10.30 ಕ್ಕೆ ಸಿದ್ಧಗಂಗಾ ಮಠದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು. ಗೋಸಲ ಸಿದ್ದೇಶ್ವರ ರಂಗಮಂದಿರದಲ್ಲಿ ಸಮಾರಂಭ ನಡೆಯಲಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಸಚಿವ ವಿ. ಸೋಮಣ್ಣ, ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವರಾದ ಡಾ.ಜಿ. ಪರಮೇಶ್ವರ್, ಕೆ.ಎನ್. ರಾಜಣ್ಣ, ಶಾಸಕರಾದ ಸುರೇಶ್ ಗೌಡ, ಜ್ಯೋತಿ ಗಣೇಶ್ ಹಾಗೂ ವಿವಿಧ ಮಠಾಧೀಶರು ಭಾಗವಹಿಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular