HomeIndiaಪಟಾಕಿ ಕಾರ್ಖಾನೆ ಸ್ಫೋಟ: ಮಕ್ಕಳು ಸೇರಿ 6 ಜನರು ಸಜೀವದಹನ

ಪಟಾಕಿ ಕಾರ್ಖಾನೆ ಸ್ಫೋಟ: ಮಕ್ಕಳು ಸೇರಿ 6 ಜನರು ಸಜೀವದಹನ

ಪಟಾಕಿ ಕಾರ್ಖಾನೆಯೊಂದರಲ್ಲಿ ಭೀಕರ ಸ್ಫೋಟ ಸಂಭವಿಸಿ ಮೂವರು ಮಕ್ಕಳು ಸೇರಿದಂತೆ 6ಜನರು ಸಜೀವದಹನವಾಗಿರುವ ಘಟನೆ ಪಶ್ಚಿಮ ಬಂಗಾಳದ ದಕ್ಷಿಣ 24ಪರಗಣ ಜಿಲ್ಲೆಯ ಪಥಾರ್ ಪ್ರತಿಮಾದಲ್ಲಿ ನಡೆದಿದೆ.

ಚಂದ್ರನಾಥ್ ಬಾನಿಕ್ ಎಂಬುವವರಿಗೆ ಸೇರಿದ ಪಟಾಕಿ ಖಾರ್ಖಾನೆ ಇದಾಗಿದ್ದು, ಅಕ್ರಮವಾಗಿ ಕಾರ್ಖಾನೆ ನಡೆಸುತ್ತಿದ್ದರು ಎನ್ನಲಾಗಿದೆ. ಪಟಾಕಿ ಕಾರ್ಖಾನೆಯಲ್ಲಿ ತಡ ರಾತ್ರಿ ಏಕಾಏಕಿ ಸ್ಫೋಟ ಸಂಭವಿಸಿದ್ದು 6 ಜನರು ಸುಟ್ಟು ಕರಕಲಾಗಿದ್ದರೆ.

ಬೊಂಕಿ ಹೊತ್ತಿಕೊಳ್ಳುತ್ತಿದ್ದಂತೆ ಸ್ಥಳೀಯರು ಕೂಡ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ದೋಲಾಹತ್ ಠಾಣೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವಷ್ಟರಲ್ಲಿ ಆರು ಜನರು ಬೆಂಕಿಗಾಹುತಿಯಾಗಿದ್ದಾರೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪಟಾಕಿ ಕಾರ್ಖಾನೆಯ ಗೋದಾಅಮು ಸ್ಫೋಟಗೊಂಡಿದೆ ಎನ್ನಲಾಗಿದೆ. ಎರಡು ವರ್ಷಗಳಿಂದ ಅಕ್ರಮವಾಗಿ ಪಟಾಕಿ ತಯಾರಿಕಾ ಕಾರ್ಖಾನೆ ನಡೆಸಲಾಗುತ್ತಿತ್ತು ಎಂಬ ಆರೋಪ ಕೇಳಿಬಂದಿದೆ.

 

For Latest News Updates, Join Our Whatsapp Community🚩
RELATED ARTICLES

Most Popular