HomeKarnatakaಹಾಲು ಉತ್ಪಾದಕರಿಗೆ ಸಿಹಿ ಸುದ್ದಿ: ಏರಿಕೆಯಾದ ಹಾಲಿನ ದರ ಸಂಪೂರ್ಣ ರೈತರಿಗೆ

ಹಾಲು ಉತ್ಪಾದಕರಿಗೆ ಸಿಹಿ ಸುದ್ದಿ: ಏರಿಕೆಯಾದ ಹಾಲಿನ ದರ ಸಂಪೂರ್ಣ ರೈತರಿಗೆ

ಚಾಮರಾಜನಗರ: ಹಾಲಿನ ದರವನ್ನು 4 ರೂಪಾಯಿ ಏರಿಕೆ ಮಾಡಲಾಗಿದ್ದು, ಆ ಹಣವನ್ನು ಸಂಪೂರ್ಣವಾಗಿ ರೈತರಿಗೆ ನೀಡಲಾಗುವುದು ಎಂದು ಪಶು ಸಂಗೋಪನಾ ಸಚಿವ ಕೆ. ವೆಂಕಟೇಶ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳವಾರದಿಂದ ಜಾರಿಗೆ ಬರುವಂತೆ ಹಾಲಿನ ದರವನ್ನು 4 ರೂಪಾಯಿ ಏರಿಕೆ ಮಾಡಲಾಗಿದ್ದು, ಈ ಹಣವನ್ನು ಹಾಲು ಉತ್ಪಾದಕರಿಗೆ ನೀಡುವಂತೆ ಎಲ್ಲಾ ಹಾಲು ಒಕ್ಕೂಟಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಹಾಲು, ಮೊಸರು, ವಿದ್ಯುತ್ ಬೆಲೆ ಏರಿಕೆಗೆ ಬಿಜೆಪಿ ವಿರೋಧ ವ್ಯಕ್ತಪಡಿಸಿರುವ ಕುರಿತು ಪ್ರತಿಕ್ರಿಯೆ ನೀಡಿದ ಸಚಿವರು, ಮನಮೋಹನ್ ಸಿಂಗ್ ಸರ್ಕಾರ ಇದ್ದಾಗ 60 ರೂಪಾಯಿಗೆ ಇದ್ದ ಪೆಟ್ರೋಲ್ ದರ ಈಗ 103 ರೂಪಾಯಿ ಆಗಿದೆ. ಅದರ ಬಗ್ಗೆ ಯಾಕೆ ಯಾರೂ ಮಾತನಾಡುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular