HomeKarnatakaಬೆಲೆ ಏರಿಕೆ ವಿರೋಧಿಸಿ ಅಹೋರಾತ್ರಿ ಬಿಜೆಪಿ ಹೋರಾಟ: ರಾತ್ರಿಯಿಡೀ ಧರಣಿ ಸ್ಥಳದಲ್ಲೇ ನಾಯಕರ ವಾಸ್ತವ್ಯ

ಬೆಲೆ ಏರಿಕೆ ವಿರೋಧಿಸಿ ಅಹೋರಾತ್ರಿ ಬಿಜೆಪಿ ಹೋರಾಟ: ರಾತ್ರಿಯಿಡೀ ಧರಣಿ ಸ್ಥಳದಲ್ಲೇ ನಾಯಕರ ವಾಸ್ತವ್ಯ

ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ, ರಾಜ್ಯ ಸರ್ಕಾರದ ನಡೆ ಖಂಡಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬಿಜೆಪಿ ಅಹೋರಾತ್ರಿ ಧರಣಿ ನಡೆಸಿದೆ.

ಫ್ರೀಡಂ ಪಾರ್ಕ್ ನಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಕ್ರೋಶ ಕಹಳೆ ಮೊಳಗಿಸಲಾಗಿದ್ದು, ರಾತ್ರಿಯಿಡೀ ಧರಣಿ ಸ್ಥಳದಲ್ಲೇ ನಾಯಕರು ವಾಸ್ತವ್ಯ ಹೂಡಿದ್ದಾರೆ. ಇಂದು ಮಧ್ಯಾಹ್ನದವರೆಗೆ ಹೋರಾಟ ಮುಂದುವರೆಯಲಿದೆ.

ಬುಧವಾರದಿಂದ ಅಹೋರಾತ್ರಿ ಧರಣಿ ಆರಂಭಿಸಿದ್ದು, ಗುರುವಾರ ಮಧ್ಯಾಹ್ನದವರೆಗೂ ಹೋರಾಟ ನಡೆಸಲಾಗುವುದು. ಇದೇ ತಿಂಗಳ 8ರಂದು ರಾಜ್ಯಾದ್ಯಂತ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ ಕೈಗೊಂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಹೋರಾತ್ರಿ ಧರಣಿಯಲ್ಲಿ ಬಿಜೆಪಿ ನಾಯಕರಾದ ಬಿ.ವೈ. ವಿಜಯೇಂದ್ರ, ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ, ಸಿ.ಟಿ. ರವಿ, ಶಾಸಕರು, ಮಾಜಿ ಶಾಸಕರು, ವಿಧಾನ ಪರಿಷತ್ ಸದಸ್ಯರು ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular