ಕೊಪ್ಪಳ: ವಿದ್ಯುತ್ ತಂತಿ ಮೈಮೇಲೆ ಬಿದ್ದು ಶಿಕ್ಷಕಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆ ಗಂಗಾವತಿ ಸಮೀಪದ ಜಂಗಮರ ಕಲ್ಗುಡಿ ಗ್ರಾಮದ ಬಳಿ ನಡೆದಿದೆ. ಗಂಗಾವತಿ ವಿದ್ಯಾನಗರದ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ಕಲ್ಗುಡಿ ಗ್ರಾಮದ ಹೊಸಕೇರಿಯ ಹರಿತಾ(26) ಮೃತಪಟ್ಟವರು ಎಂದು ಹೇಳಲಾಗಿದೆ.
ಶಾಲಾ ಬಸ್ ನಲ್ಲಿ ಗ್ರಾಮದಿಂದ ಮಕ್ಕಳೊಂದಿಗೆ ಶಾಲೆಗೆ ಹೋಗಿ ಬರುತ್ತಿದ್ದರು. ಎಂದಿನಂತೆ ಶಾಲೆಗೆ ಹೋಗಲು ಮನೆಯಿಂದ ಬೈಕ್ ನಲ್ಲಿ ಬರುತ್ತಿದ್ದ ವೇಳೆ ವಿದ್ಯುತ್ ತಂತಿ ಅವರ ಮೇಲೆ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.