HomeKarnatakaಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ನೇರ ಸಂದರ್ಶನದ ಮೂಲಕ ನೇಮಕಾತಿ ಬಗ್ಗೆ ಇಲ್ಲಿದೆ ಮಾಹಿತಿ

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ನೇರ ಸಂದರ್ಶನದ ಮೂಲಕ ನೇಮಕಾತಿ ಬಗ್ಗೆ ಇಲ್ಲಿದೆ ಮಾಹಿತಿ

ಕೊಪ್ಪಳ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿಂದ ವಾಕ್ ಇನ್ ಇಂಟರ್ವ್ಯೂವನ್ನು ಏಪ್ರಿಲ್ 7 ರಂದು ಬೆಳಿಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 1.30ರ ವರೆಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಆಯೋಜಿಸಲಾಗಿದೆ.

ಈ ವಾಕ್ ಇನ್ ಇಂಟರ್ವ್ಯೂವ್ ನಲ್ಲಿ ಖಾಸಗಿ ಸಂಸ್ಥೆಗಳು ತಮ್ಮಲ್ಲಿನ ಖಾಲಿ ಹುದ್ದೆಗಳಿಗೆ ಎಸ್.ಎಸ್.ಎಲ್.ಸಿ., ಪಿ.ಯು.ಸಿ., ತತ್ಸಮಾನ, ಡಿಪ್ಲೊಮಾ, ಐ.ಟಿ.ಐ ಯಾವುದೇ ಪದವಿ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ ಎಲ್ಲರಿಗೂ ಉಚಿತ ಪ್ರವೇಶವಿರುತ್ತದೆ.

ಈ ವಾಕ್ ಇನ್ ಇಂಟರ್ವ್ಯೂವ್ ನಲ್ಲಿ ಭಾಗವಹಿಸುವ ಆಸಕ್ತಿಯುಳ್ಳ 18 ರಿಂದ 25 ವರ್ಷದ ವರೆಗಿನ ಅರ್ಹ ವಿದ್ಯಾರ್ಹತೆ ಹೊಂದಿದ ನಿರುದ್ಯೋಗಿ ಯುವಕ ಮತ್ತು ಯುವತಿಯರು ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳ 3 ಪ್ರತಿಗಳೊಂದಿಗೆ ಮತ್ತು ಆಧಾರ್ ಕಾರ್ಡಿನ ಪ್ರತಿ, ಬಯೋಡಾಟಾ(ರೆಜುಮ್) ಹಾಗೂ 2 ಪಾಸ್ ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ಈ ವಾಕ್ ಇನ್ ಇಂಟರ್ವ್ಯೂವ್ ನಲ್ಲಿ ಭಾಗವಹಿಸಿ, ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಅಥವಾ ದೂ.ಸಂ: 08539-220859ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular