HomeKarnatakaರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್: ನಿರ್ಬಂಧ ಸಡಿಲಿಸಿ ಎಲ್ಲಾ ವರ್ಗದವರಿಗೂ ನೀರಾವರಿ ಸಹಾಯಧನ ಸಬ್ಸಿಡಿ...

ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್: ನಿರ್ಬಂಧ ಸಡಿಲಿಸಿ ಎಲ್ಲಾ ವರ್ಗದವರಿಗೂ ನೀರಾವರಿ ಸಹಾಯಧನ ಸಬ್ಸಿಡಿ ಸೌಲಭ್ಯ ವಿಸ್ತರಿಸಿ ಆದೇಶ

ಬೆಂಗಳೂರು: ತುಂತುರು ನೀರಾವರಿಗೆ ಸಹಾಯಧನದಡಿ ಪರಿಕರಗಳನ್ನು ಪಡೆಯಲು ಇದ್ದ ನಿರ್ಬಂಧವನ್ನು ಸರ್ಕಾರ ಸಡಿಲಿಕೆ ಮಾಡಿದೆ. ಎಲ್ಲಾ ವರ್ಗದ ರೈತರಿಗೆ ಸಬ್ಸಿಡಿ ನವೀಕರಣ ಸೌಲಭ್ಯ ವಿಸ್ತರಿಸಿ ಆದೇಶಿಸಲಾಗಿದೆ.

ಪರಿಶಿಷ್ಟ ಜಾತಿ, ಪಂಗಡಗಳ ರೈತರು 7 ವರ್ಷಗಳ ನಂತರ ಅದೇ ಜಮೀನಿಗೆ ಸಹಾಯಧನ ಪಡೆಯಲು ಅವಕಾಶ ಕಲ್ಪಿಸಲಾಗಿತ್ತು. ಇದೀಗ ಇತರೆ ವರ್ಗದ ರೈತರಿಗೂ ಕೂಡ ಸಬ್ಸಿಡಿ ನವೀಕರಣ ಸೌಲಭ್ಯ ವಿಸ್ತರಿಸಿ ಸರ್ಕಾರ ಆದೇಶಿಸಿದೆ. ಈ ಹಿಂದೆ ಇತರೆ ವರ್ಗದ ರೈತರಿಗೂ ಒಂದು ಸಲ ಮಾತ್ರ ಒಂದು ನಿರ್ದಿಷ್ಟ ಜಮೀನಿಗೆ ಹನಿ ನೀರಾವರಿ, ತುಂತುರು ನೀರಾವರಿ ಘಟಕಗಳನ್ನು ಪಡೆಯಲು ಅವಕಾಶ ಕಲ್ಪಿಸಲಾಗಿತ್ತು.

ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ರಾಜ್ಯ ಪ್ರವಾಸ ಕೈಗೊಂಡ ಸಂದರ್ಭದಲ್ಲಿ ಎಲ್ಲಾ ಜಿಲ್ಲೆಗಳ ಇತರೆ ವರ್ಗದ ರೈತರು ನಿರ್ಬಂಧ ಸಡಿಲಿಸಲು ಮನವಿ ಮಾಡಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ ಸಚಿವರು ಕ್ರಮ ಕೈಗೊಂಡಿದ್ದಾರೆ. ಇತರೆ ವರ್ಗದ ರೈತರ ಮೇಲಿನ ನಿರ್ಬಂಧ ಸಡಿಸಿಸಿ 7 ವರ್ಷದ ನಂತರ ಮತ್ತದೇ ಜಮೀನಿಗೆ ಸಬ್ಸಿಡಿ ನವೀಕರಣದ ಅವಕಾಶ ಕಲ್ಪಿಸಿ ಆದೇಶ ಹೊರಡಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular