ಬೆಳಗಾವಿ: ರಾಜ್ಯಪಾಲರ ಹೆಸರಲ್ಲಿದ್ದ ಐದೂವರೆ ಎಕರೆ ಜಮೀನು ಭೂಗಳ್ಳರ ಪಾಲಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮಲ್ಲಮ್ಮನ ಬೆಳವಡಿಯಲ್ಲಿ ನಡೆದಿದೆ.
ಬಡ ಜನರಿಗೆ ನಿವೇಶನ ಹಂಚಲು ಸರ್ಕಾರ ಖರೀದಿಸಿದ್ದ ಜಮೀನನ್ನು ಇತ್ತ್ತೀಚೆಗೆ ಖಾಸಗಿ ವ್ಯಕ್ತಿಗಳ ಹೆಸರಿಗೆ ಮಾಡಿಕೊಂಡು ತಿದ್ದುಪಡಿ ಮಾಅಡುವ ಮೂಲಕ ವಂಚನೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.
ಮಲ್ಲಮ್ಮನ ಬೆಳವಡಿಯಲ್ಲಿರುವ ಸರ್ವೆ ನಂ. 221/1ಬ 19 ಎಕರೆ 30ಗುಂಟೆ ಸಾಗುವಳಿ ಜಮೀನಿನ ಪೈಕಿ 6ಎಕರೆ ಜಮೀನನ್ನು 2002ರಲ್ಲಿ ಖರೀದಿಸಿ, ರಾಜ್ಯಪಾಲರ ಹೆಸರಲ್ಲಿ ನೊಂದಣಿ ಮಾಡಲಾಗಿತ್ತು. ಜಮೀನನ್ನು ಬಡ ಜನರಿಗೆ ಹಂಚುವ ಉದ್ದೇಶದಲ್ಲಿ ಸರ್ಕಾರ ಈ ಕ್ರಮ ಕೈಗೊಂಡಿತ್ತು. ಕೆಲ ವರ್ಷಗಳ ಹಿಂದೆ ಇದೇ ಸರ್ವೆ ನಂಬರ್ ನ ಜಮೀನಿನ ಪಹಣಿ ಪತ್ರ ಸರಿಪಡಿಸುವ ನೆಪದಲ್ಲಿ ಗೋಲ್ ಮಾಲ್ ಎಸಗಲಾಗಿದೆ ಜಮೀನಿನಲ್ಲಿ ಯಾವುದೇ ಅನುಮತಿ ಇಲ್ಲದೇ ಖಾಸಗಿ ವ್ಯಕ್ತಿಗಳ ಹೆಸರು ಸೇರ್ಪಡೆ ಮಾಡಲಾಗಿದೆ ಎಂದು ಆರ್ ಟಿಐ ಕಾರ್ಯಕರ್ತ ಭೀಮಪ್ಪ ಗಡಾಅದ್ ಗಂಭೀರ ಆರೋಪ ಮಾಡಿದ್ದಾರೆ.
ಹಿಂದಿನ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಹಾಗೂ ಎಸಿ ಪ್ರಭಾವತಿ ತಿದ್ದುಪಡಿ ಕಾರ್ಯದಲ್ಲಿ ಶಾಮೀಲಾಗಿದ್ದಾರೆ ಎಂದು ಆರೋಪಿಸಲಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.