ಬಳ್ಳಾರಿ: ಹಾಡಹಗಲೇ ವ್ಯಕ್ತಿಯೋರ್ವನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬಳ್ಳಾರಿಯ ರಾಣಿತೋಟದಲ್ಲಿ ನಡೆದಿದೆ.
ಬಳ್ಳಾರಿಯ ಕಣೇಕಲ್ ರಸ್ತೆಯ ರಾಣಿತೋಟದಲ್ಲಿ ವ್ಯಕ್ತಿಯನ್ನು ಹತ್ಯೆ ಮಾಡಲಾಗಿದೆ. ವೆಂಕಟೇಶ್ ಕೊಲೆಯಾಗಿರುವ ದುರ್ದೈವಿ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಯಾವ ಕಾರಣಕ್ಕೆ ಹತ್ಯೆ ನಡೆದಿದೆ ಎಂಬುದು ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.