HomeLatest Newsಬಿಜೆಪಿಯಿಂದ ಯತ್ನಾಳ್ ಉಚ್ಚಾಟನೆ ವಿರೋಧಿಸಿ ರಾಜ್ಯಾದ್ಯಂತ ಹೋರಾಟಕ್ಕೆ ಸ್ವಾಮೀಜಿ ಕರೆ: ಮೇ 11 ರಂದು ವಿಜಯಪುರದಲ್ಲಿ...

ಬಿಜೆಪಿಯಿಂದ ಯತ್ನಾಳ್ ಉಚ್ಚಾಟನೆ ವಿರೋಧಿಸಿ ರಾಜ್ಯಾದ್ಯಂತ ಹೋರಾಟಕ್ಕೆ ಸ್ವಾಮೀಜಿ ಕರೆ: ಮೇ 11 ರಂದು ವಿಜಯಪುರದಲ್ಲಿ ರಾಜ್ಯಮಟ್ಟದ ಬೃಹತ್ ಸಮಾವೇಶ

ವಿಜಯಪುರ: ಬಿಜೆಪಿಯಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಉಚ್ಚಾಟನೆ ಮಾಡಿರುವುದನ್ನು ಖಂಡಿಸಿ ಜಯಮೃತ್ಯುಂಜಯ ಸ್ವಾಮೀಜಿ ರಾಜ್ಯಾದ್ಯಂತ ಹೋರಾಟಕ್ಕೆ ಕರೆ ನೀಡಿದ್ದಾರೆ.

ಹೈಕಮಾಂಡ್ ನಾಯಕರ ಗಮನ ಸೆಳೆಯಲು ನಿರ್ಧರಿಸಲಾಗಿದ್ದು, ರಾಜ್ಯಮಟ್ಟದಲ್ಲಿ ಬೃಹತ್ ಹೋರಾಟಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ. ಬೃಹತ್ ಹೋರಾಟಕ್ಕೆ ಸ್ವಾಮೀಜಿ ಕರೆ ನೀಡಿದ್ದಾರೆ.

ಬಿಜೆಪಿಯಿಂದ ಶಾಸಕ ಯತ್ನಾಳ್ ಅವರನ್ನು ಉಚ್ಚಾಟನೆ ಮಾಡಿರುವುದನ್ನು ವಿರೋಧಿಸಿ ಮೇ 11ರಂದು ರಾಜ್ಯಮಟ್ಟದ ಬೃಹತ್ ಸಮಾವೇಶವನ್ನು ವಿಜಯಪುರ ನಗರದಲ್ಲಿ ನಡೆಸಲು ನಿರ್ಧಾರ ಕೈಗೊಳ್ಳಲಾಗಿದೆ. ವಿರಾಟ್ ರಾಷ್ಟ್ರೀಯ ರ್ಯಾಲಿ ಎಂಬ ಹೆಸರಿನಲ್ಲಿ ಬೃಹತ್ ಸಮಾವೇಶ ನಡೆಸಲಾಗುವುದು. ಸುಮಾರು 5 ಲಕ್ಷದಿಂದ 10 ಲಕ್ಷ ಜನರು ಭಾಗಿಯಾಗುವ ಸಾಧ್ಯತೆ ಇದೆ ಎಂದು ಸ್ವಾಮೀಜಿ ಹೇಳಿದ್ದಾರೆ. ಯತ್ನಾಳ್ ಉಚ್ಚಾಟನೆ ಖಂಡಿಸಿ ಪಂಚಮಸಾಲಿ ಸಮುದಾಯ ಸಮರ ಸಾರಿದ್ದು, ಬೃಹತ್ ಹೋರಾಟ ನಡೆಸಲು ನಿರ್ಧರಿಸಿದೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular