ಕಲಬುರಗಿ : ಕಲಬುರಗಿಯಲ್ಲಿ ಬೆಳ್ಳಂ ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ನಿಂತಿದ್ದ ಲಾರಿಗೆ ಮ್ಯಾಕ್ಸಿಕ್ಯಾಬ್ ಡಿಕ್ಕಿಯಾಗಿ ಐವರು ಮೃತಪಟ್ಟಿದ್ದಾರೆ.
ಜೇವರ್ಗಿ ತಾಲೂಕಿನ ನೆಲೋಗಿ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದೆ. ನಿಂತಿದ್ದ ಲಾರಿಗೆ ಮ್ಯಾಕ್ಸಿಕ್ಯಾಬ್ ಡಿಕ್ಕಿಯಾಗಿ ಐವರು ಮೃತಪಟ್ಟಿದ್ದಾರೆ. ಇಂದು ನಸುಕಿನಜಾವ ಈ ಅಪಘಾತ ಸಂಭವಿಸಿದೆ.
ಮ್ಯಾಕ್ಸಿಕ್ಯಾಬ್ ನಲ್ಲಿ ಸುಮಾರು 31 ಮಂದಿ ಪ್ರಯಾಣಿಸುತ್ತಿದ್ದರು, ವೇಗವಾಗಿ ಬರುತ್ತಿದ್ದ ಮ್ಯಾಕ್ಸಿಕ್ಯಾಬ್ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಚಾಲಕನ ಅಜಾಗರೂಕತೆಯಿಂದ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಮೃತರೆಲ್ಲರೂ ಬಾಗಲಕೋಟೆ ಮೂಲದವರು ಎಂದು ಹೇಳಲಾಗುತ್ತಿದೆ. ಅಪಘಾತದಲ್ಲಿ ಸ್ಥಳದಲ್ಲೇ ಐವರು ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ.ವಾಜೀದ್, ಮೆಹಬೂಬಿ, ಪ್ರಿಯಾಂಕಾ ಸೇರಿ ಐವರು ಮೃತಪಟ್ಟಿದ್ದಾರೆ.