ಬೆಂಗಳೂರು: ಸಚಿವರಾಗಿದ್ದಾಗ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ.
ಸಚಿವರಾಗಿದ್ದಾಗ ಮೂರು ತಿಂಗಳಲ್ಲಿ ತನಿಖೆ ನಡೆಸಿ ವರದಿ ಸಲ್ಲಿಸಲು ಲೋಕಾಯುಕ್ತ ಪೊಲೀಸರಿಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ನೀಡಿದೆ.
2016ರಲ್ಲಿ ವಕೀಲ ಬಿ. ವಿನೋದ್ ಖಾಸಗಿ ದೂರು ಸಲ್ಲಿಸಿದ್ದರು. ಈಶ್ವರಪ್ಪ ಜನ ಸಂಪನ್ಮೂಲ ಸಚಿವರಾಗಿದ್ದಾಗ ಅಕ್ರಮ ಆಸ್ತಿ ಗಳಿಕೆ ಮಾಡಿದ್ದಾರೆ ಎಂಬ ಆರೋಪದಡಿ ದೂರು ದಾಖಲಿಸಿದ್ದರು. ಈಶ್ವರಪ್ಪ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಆರೋಪದ ಖಾಸಗಿ ದೂರನ್ನು ಲೋಕಾಯುಕ್ತ ಕೋರ್ಟ್ ವಜಾಗೊಳಿಸಿತ್ತು.
ವಜಾ ಆದೇಶ ಪ್ರಶ್ನಿಸಿ ಬಿ. ವಿನೋದ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಮರು ಪರಿಗಣನೆಗೆ 2020 ರಲ್ಲಿ ಹೈಕೋರ್ಟ್ ಆದೇಶ ನೀಡಿತ್ತು. ಖಾಸಗಿ ದೂರು ಮರು ಪರಿಗಣಿಸಿ ತನಿಖೆಗೆ ಆದೇಶಿಸಲಾಗಿದೆ. 156(3)ರ ಅಡಿ ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಆದೇಶ ನೀಡಿದ್ದಾರೆ.