HomeLatest NewsBREAKING: ಹಿರಿಯ ಅಧಿಕಾರಿಗಳ ಭೇಟಿ ವೇಳೆ ನಿರ್ಲಕ್ಷ್ಯ, ಇನ್ ಸ್ಪೆಕ್ಟರ್ ಅಮಾನತು

BREAKING: ಹಿರಿಯ ಅಧಿಕಾರಿಗಳ ಭೇಟಿ ವೇಳೆ ನಿರ್ಲಕ್ಷ್ಯ, ಇನ್ ಸ್ಪೆಕ್ಟರ್ ಅಮಾನತು

ಶಿವಮೊಗ್ಗದ ವಿನೋಬನಗರ ಠಾಣೆಯ ಇನ್ಸ್ಪೆಕ್ಟರ್ ಚಂದ್ರಕಲಾ ಅವರನ್ನು ಅಮಾನತು ಮಾಡಿ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಆದೇಶ ಹೊರಡಿಸಿದ್ದಾರೆ.

ಚಂದ್ರಕಲಾ ಅವರು ವಿನೋಬನಗರ ಪೊಲೀಸ್ ಠಾಣೆಗೆ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಭೇಟಿ ನೀಡಿದ್ದ ವೇಳೆ ನಿರ್ಲಕ್ಷ್ಯ ವಹಿಸಿದ ಆರೋಪ ಕೇಳಿ ಬಂದಿತ್ತು.

ಅಡಿಷನಲ್ ಎಸ್ಪಿ ಅನಿಲ್ ಕುಮಾರ್ ಭೂಮರೆಡ್ಡಿ ವಿನೋಬನಗರ ಠಾಣೆಗೆ ಭೇಟಿ ನೀಡಿದ ಸಂದರ್ಭದಲ್ಲಿ ನಿರ್ಲಕ್ಷ್ಯ ತೋರಿದ್ದರು, ಇಲಾಖೆ ತನಿಖೆಯ ವೇಳೆ ಸರಿಯಾಗಿ ಕಡತ ವಿಲೇವಾರಿ ಮಾಡಿರಲಿಲ್ಲ. ಹಿರಿಯ ಅಧಿಕಾರಿಗಳು ಠಾಣೆಗೆ ಬಂದಾಗ ಸರಿಯಾಗಿ ಸ್ಪಂದಿಸುತ್ತಿರಲಿಲ್ಲ ಈ ಹಿನ್ನಲೆಯಲ್ಲಿ ಇನ್ ಸ್ಪೆಕ್ಟರ್ ಚಂದ್ರಕಲಾ ಅವರನ್ನು ಒಂದು ತಿಂಗಳ ಕಾಲ ಅಮಾನತು ಮಾಡಿ ಎಸ್ಪಿ ಆದೇಶಿಸಿದ್ದಾರೆ. ಅವರನ್ನು ತನಿಖೆಗೊಳಪಡಿಸಲಾಗುವುದು ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular