ಬೆಂಗಳೂರು: ಯಾರಿಂದಲೂ ಒಳ ಮೀಸಲಾತಿ ಜಾರಿ ತಡೆಯಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ವಿಧಾನಸೌಧದ ಆವರಣದಲ್ಲಿ ಸಮಾಜ ಕಲ್ಯಾಣ ಇಲಾಖೆ ಶನಿವಾರ ಆಯೋಜಿಸಿದ್ದ ಬಾಬೂ ಜಗಜೀವನ್ ರಾಮ್ ಅವರ 118ನೇ ಜನ್ಮದಿನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರ ಮಾತನಾಡಿ, ಯಾರು ಬೇಡವೆಂದರೂ ಒಳ ಮೀಸಲಾತಿ ಜಾರಿ ಮಾಡುವುದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ. ಎರಡು ತಿಂಗಳ ನಂತರ ಒಳ ಮೀಸಲಾತಿ ಜಾರಿ ಮಾಡಿಯೇ ಮಾಡುತ್ತೇವೆ ಎಂದು ಹೇಳಿದ್ದಾರೆ.
ಸುಪ್ರೀಂಕೋರ್ಟ್ ಆದೇಶ ಪಾಲಿಸುತ್ತೇವೆ. ಆಯೋಗದ ಅಧ್ಯಕ್ಷ ನಾಗಮೋಹನದಾಸ್ ಅವರು ಎರಡು ತಿಂಗಳ ಅವಧಿ ಕೇಳಿದ್ದಾರೆ. ನಂತರ ಪರಿಶಿಷ್ಟ ಗುಂಪಿನ ಯಾವ ಜಾತಿಗೂ ಅನ್ಯಾಯವಾಗದಂತೆ ಒಳ ಮೀಸಲಾತಿ ಜಾರಿ ಮಾಡುತ್ತೇವೆ ಎಂದು ಸಿಎಂ ಭರವಸೆ ನೀಡಿದ್ದಾರೆ.
ಒಳಮೀಸಲಾತಿ ಜಾರಿ ಮಾಡಲು ನಮ್ಮ ಸರ್ಕಾರ ಬದ್ಧವಾಗಿದೆ. ಈ ಬಗ್ಗೆ ಯಾವುದೇ ಅನುಮಾನ ಬೇಡ. pic.twitter.com/IjRGIktlBM
— Siddaramaiah (@siddaramaiah) April 5, 2025