HomeLatest Newsಕಾಲೇಜ್ ವಿದ್ಯಾರ್ಥಿನಿ ಬೆದರಿಸಿ ನಿರಂತರ ಅತ್ಯಾಚಾರ: ಸಬ್ ಇನ್ಸ್ಪೆಕ್ಟರ್ ಪುತ್ರ ಅರೆಸ್ಟ್: ಆಸ್ಪತ್ರೆಯಲ್ಲಿ ಗರ್ಭಿಣಿ ಎಂದು...

ಕಾಲೇಜ್ ವಿದ್ಯಾರ್ಥಿನಿ ಬೆದರಿಸಿ ನಿರಂತರ ಅತ್ಯಾಚಾರ: ಸಬ್ ಇನ್ಸ್ಪೆಕ್ಟರ್ ಪುತ್ರ ಅರೆಸ್ಟ್: ಆಸ್ಪತ್ರೆಯಲ್ಲಿ ಗರ್ಭಿಣಿ ಎಂದು ಗೊತ್ತಾಗಿ ತಾಯಿಗೆ ಶಾಕ್

ಮಂಗಳೂರು: ಕಾಲೇಜು ವಿದ್ಯಾರ್ಥಿನಿಯನ್ನು ಬೆದರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಸಬ್ ಇನ್ಸ್ಪೆಕ್ಟರ್ ಪುತ್ರನನ್ನು ಬಂಧಿಸಲಾಗಿದೆ.

ಕಟ್ಟತಡ್ಕ ನಿವಾಸಿ ರಿಕ್ಷಾ ಚಾಲಕ ಮಂಜುನಾಥ್ ಬಂಧಿತ ಆರೋಪಿ. ಈತನ ವಿರುದ್ಧ ದಕ್ಷಿಣ ಕನ್ನಡ ಮಹಿಳಾ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. 2024ರ ಆಗಸ್ಟ್ ನಲ್ಲಿ ಕಾಲೇಜಿಗೆ ರಜೆ ಇದ್ದ ಕಾರಣ ವಿದ್ಯಾರ್ಥಿನಿ ಮನೆಯಲ್ಲಿ ಒಬ್ಬಳೇ ಇದ್ದಳು. ಆಕೆಗೆ ಪರಿಚಯವಿರುವ ಮಂಜುನಾಥ್ ನೀರು ಕೇಳುವ ನೆಪದಲ್ಲಿ ಆಗಮಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದ.

ನಂತರ ಹಲವಾರು ಬಾರಿ ಬೆದರಿಕೆ ಹಾಕಿ ಆಕೆಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದ. ಕೆಲ ಸಮಯದಿಂದ ಬಾಲಕಿ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಏಪ್ರಿಲ್ 5 ರಂದು ತಾಯಿಯೊಂದಿಗೆ ಪುತ್ತೂರು ಸಾರ್ವಜನಿಕ ಆಸ್ಪತ್ರೆಗೆ ಹೋದಾಗ ಗರ್ಭಿಣಿಯಾಗಿರುವುದು ತಿಳಿದುಬಂದಿದೆ. ನಂತರ ಬಾಲಕಿಯ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular